ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪೂರ್ವದಲ್ಲಿ ಜೂನ್ 1ರಂದು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪರೀಕ್ಷೆಯಲ್ಲಿ ಭಾಗವಹಿಸಲಿಚ್ಚಿಸುವವರು 2014ರ ಮೇ 3ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಅಂತರ್ಜಾಲ ತಾಣ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ವೀಕ್ಷಿಸಬಹುದಾಗಿದೆ. ಅಲ್ಲದೆ, ಸಹಾಯವಾಣಿ- 8904779508/ 8904765537 ಸಂಪರ್ಕಿಸುವಂತೆ ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.