ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರೈಲಿಗೆ ಸಿಲುಕಿ ವ್ಯಕ್ತಿ ಸಾವು

Rashmi Kasaragodu
Updated On : 27 Apr 2014, 2:10 am

ಬೀರೂರು: ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುವ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದ ಹೃದಯ ಭಾಗದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.  ಶಿವಶಂಕರ್ ಮೃತಪಟ್ಟವರು. ಪೇಯಿಟಿಂಗ್ ಕೆಲಸ
ಮಾಡುತ್ತಿದ್ದ ಶಿವಶಂಕರ್ ಎಂದಿನಂತೆ ಕೆಲಸ ಮುಗಿಸಿಕೊಂಡು  ಸಂಜೆ ಮನೆಗೆ ತೆರಳುವ ಸಂದರ್ಭದಲ್ಲಿ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲು ಆಗಮಿಸುತ್ತಿರುವುದನ್ನು ಗಮನಿಸದೇ ಹಳಿ ದಾಟುವ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.   ಶಿವಶಂಕರ್ ಅವರು ಚಂದ್ರಪ್ಪ ಎಂಬುವವರ ಪುತ್ರರಾಗಿದ್ದು ಅಂಚೇರ ಬೀದಿಯಲ್ಲಿ ವಾಸವಾಗಿದ್ದರು. ಅರಸೀಕೆರೆ ರೇಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಇದೊಂದು ಆಕಸ್ಮಿಕ ಘಟನೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಎಐಟಿ ಕಾಲೇಜಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಚಿಕ್ಕಮಗಳೂರು: ನಗರದ ಎಐಟಿ ಕಾಲೇಜು ತನ್ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಏ. 29 ರಂದು ಬೀಳ್ಕೋಡುಗೆ ಸಮಾರಂಭ ಹಮ್ಮಿಕೊಂಡಿದೆ. ಅಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಎಸ್.ಟಿ.ಎನ್. ರಂಗಮಂದಿರದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಿಲಾನಂದನಾಥ ಮಹಾಸ್ವಾಮಿ ಹಾಗೂ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಡಿಐಎಟಿ ಕುಲಪತಿ ಡಾ. ಪ್ರಹ್ಲಾದ ಹಾಗೂ ಐ.ಐ.ಎಸ್.ಸಿ.ನ ಪ್ರಾಧ್ಯಾಪಕ ಡಾ. ಟಿ.ಜಿ. ಸೀತಾರಾಮ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಡಾ. ಸಿ.ಕೆ. ಸುಬ್ರಾಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement