ಮಕ್ಕಳಿಗೆ ಬೇಸಿಗೆ ಶಿಬಿರ ಮೇ 8 ರಿಂದ
ನರಸಿಂಹರಾಜಪುರ: ಇಲ್ಲಿನ ಬಾಲಭವನ ಸೊಸೈಟಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಆಶ್ರಯದಲ್ಲಿ ಮೇ 8 ರಿಂದ 10 ದಿನಗಳ ಕಾಲ 8 ವರ್ಷದಿಂದ 16 ವರ್ಷದೊಳಗಿನ ಮಕ್ಕಳಿಗೆ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಆಸಕ್ತ ಮಕ್ಕಳ ಪೋಷಕರು ಮಿನಿ ವಿಧಾನಸೌದದ ಶಿಶು ಅಭವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಮೊದಲು ನೋಂದಣಿ ಮಾಡಿದ ಮಕ್ಕಳಿಗೆ ಮಾತ್ರ ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ಇದೆ.
ಶಿಬಿರದಲ್ಲಿ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಚಿತ್ರಕಲೆ, ಕರಕುಶಲತೆ, ಯೋಗ, ಸಮೂಹ ನೃತ್ಯ, ಸಮೂಹ ಗೀತೆ, ಹೂ ತಯಾರಿಕೆ ತರಬೇತಿ ನೀಡಲಾಗುತ್ತದೆ.