ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸ್ತ್ರೀ ಸಾಧನೆಯೇ ವಿಶೇಷ: ವೀಣಾ

Rashmi Kasaragodu
Updated On : 29 Apr 2014, 11:31 am

ನರಸಿಂಹರಾಜಪುರ: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ ವಿಶೇಷ ಎಂದು ಶಿವಮೊಗ್ಗದ ವಾಣಿಜ್ಯ-ಕಲಾ ವಿಭಾಗದ ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ವೀಣಾ ಸುರೇಶ್ ತಿಳಿಸಿದರು.
ಕೃಷಿ ಭವನದಲ್ಲಿ ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ 17ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹೆಣ್ಣು ಇಲ್ಲದ ಸಂಸಾರವನ್ನು ಊಹಿಸಲೂ ಸಾಧ್ಯವಿಲ್ಲ. ಮನೆಯಲ್ಲಿ ಮಕ್ಕಳ ಹಾಗೂ ಗಂಡನ ಯೋಗಕ್ಷೇವು ನೋಡಿಕೊಂಡು ಜೊತೆಗೆ ನಾಲ್ಕು ಗೋಡೆಗಳ ಆಚೆಯೂ ಮಹಿಳೆ ಕಾಲಿಟ್ಟು ಸಾಧನೆ ಮಾಡುತ್ತಿದ್ದಾಳೆ. ಮಹಿಳೆಯರು ಇಂತಹ ಒತ್ತಡದ ಪರಿಸ್ಥಿತಿಯಲ್ಲಿ ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಯೂ ಗಮನ ನೀಡಬೇಕು ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತಿ ಮಾತನಾಡಿ, ಕಳೆದ ಒಂದು ವರ್ಷದಲ್ಲಿ ಸಂಘದ ಸದಸ್ಯರ ಸಹಕಾರದಿಂದ ದಂತ ತಪಾಸಣಾ ಶಿಬಿರ, ಹದಿ ಹರೆಯದ ಹೆಣ್ಣು ಮಕ್ಕಳಿಗೆ ಮಾಹಿತಿ, ಜಿಲ್ಲಾ ಮಟ್ಟದ ವಿವಾಹಿತ ಮಹಿಳೆಯರಿಗೆ ಥ್ರೋ ಪಂದ್ಯಾವಳಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಸಭೆಯಲ್ಲಿ ಸಂಘದ ಕಾರ್ಯದರ್ಶಿ ಚೈತ್ರಾ ರಮೇಶ್, ಖಜಾಂಚಿ ಸೀಮಾ ಸದಾನಂದ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೂತನ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಲೇಖಾ ವಸಂತ್ ಅವರನ್ನು ಸನ್ಮಾನಿಸಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಹಿತಿ ಮೀನಾಕ್ಷಿ ಕಾಂತರಾಜ್ ಮತ್ತು ಕೃಷಿ ಕ್ಷೇತ್ರದ ಸಾಧಕಿ ಸುಮಾ ಶ್ಯಾಮಯ್ಯ ಅವರನ್ನು ಅಭಿನಂದಿಸಲಾಯಿತು.
ಚೈತ್ರಾ ರಮೇಶ್ ವರದಿ ವಾಚಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಶಾಂತಿ ವೆಂಕಟೇಶ್ ಸ್ವಾಗತಿಸಿದರು. ವಸಂತ ದಿವಾಕರ ಕಾರ್ಯಕ್ರಮ ನಿರೂಪಿಸಿದರು. ಅಂಬಿಕಾ ರವಿಚಂದ್ರ ವಂದಿಸಿದರು. ನಂತರ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement