ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿ ಮೇ 2ರಿಂದ

Rashmi Kasaragodu
Updated On : 30 Apr 2014, 11:36 am

ಚಿಕ್ಕಮಗಳೂರು: ಸೀತಮ್ಮ ಮೆಮೋರಿಯಲ್ ಟ್ರಸ್ಟ್, ಆಶಾಕಿರಣ ಅಂಧಮಕ್ಕಳ ಶಾಲೆ, ಜಿಲ್ಲಾಡಳಿತ, ಜಿಪಂ ಮತ್ತು ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿ ಮೇ 2 ರಿಂದ 4 ರವರೆಗೆ ನಡೆಯಲಿದೆ.
ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಅವರು ಮೇ 2 ರಂದು ಬೆಳಗ್ಗೆ 9 ಗಂಟೆಗೆ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಏ. 4 ರಂದು ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಸಮಾರೋಪದ ಸಾನ್ನಿಧ್ಯವನ್ನು ಧಾರವಾಡ ಜಿಲ್ಲೆ ಮನಗುಂಡಿ ಮಹಾಮನೆಯ  ಜಯಬಸವಾನಂದ ಶ್ರೀ ವಹಿಸಲಿದ್ದಾರೆ.
ಭಾರತ ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ್ ನಾಯಕ್, ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ  ಪ್ರಕಾಶ್ ಜಯರಾಮಯ್ಯ, ಎಸ್. ರವಿ, ಶಾಸಕ ಸಿ.ಟಿ. ರವಿ, ಗಾಯತ್ರಿ ಶಾಂತೇಗೌಡ, ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ, ಎಐಟಿ ಪ್ರಾಂಶುಪಾಲ ಡಾ. ಸಿ.ಕೆ. ಸುಬ್ರಾಯ, ನಗರಸಭೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಎಸ್. ಗೋಪಾಲಕೃಷ್ಣ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement