ಚಿಕ್ಕಮಗಳೂರು

ಡಾ. ಅಂಬೇಡ್ಕರ್ 123ನೇ ಜನ್ಮದಿನ ಆಚರಣೆ

ಚಿಕ್ಕಮಗಳೂರು: ದೇಶದಲ್ಲಿ ಕಾರ್ಮಿಕರು, ದಲಿತರು, ಶೋಷಿತರು, ಅಲ್ಪಸಂಖ್ಯಾತರು, ಬಡವರು ನೆಮ್ಮದಿಯಿಂದ ಬದುಕುತ್ತಿದ್ದರೆ ಅದಕ್ಕೆ ಕಾರಣ ಅಂಬೇಡ್ಕರ್. ಅಸಮಾನತೆಯ ವಿರುದ್ಧ ಹೋರಾಡಿದ ಅಂಬೇಡ್ಕರ್ ರಾಷ್ಟ್ರ ನಾಯಕರು ಎಂದು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಹೇಳಿದರು.
ಶನಿವಾರ ಕೆಎಸ್ಸಾರ್ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಡಾ. ಅಂಬೇಡ್ಕರ್ 123 ನೇ ಜನ್ಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಜಗತ್ತು ಕಂಡ ಅತ್ಯಂತ ದೈತ್ಯ ಪ್ರತಿಭೆಗಳಲ್ಲಿ ಅಂಬೇಡ್ಕರ್ ಒಬ್ಬರು. ಅಂಥಾ ಅಪರೂಪದ ಪ್ರತಿಭೆಯಾಗಿ ನಮ್ಮ ದೇಶದಲ್ಲಿ ಹೊರ ಹೊಮ್ಮಲು ಅವರ ಕಠಿಣ ಪರಿಶ್ರಮ, ಅಧ್ಯಯನ, ಸತತ ಪ್ರಯತ್ನ ಕಾರಣ. ಜಾತಿ ವ್ಯವಸ್ಥೆ ದೇಶದಲ್ಲಿ ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಬಡತನವನ್ನು ಬೇಧಿಸಿಕೊಂಡು ಅಪಾರ ಜ್ಞಾನ ಗಳಿಸಿ ಜಗತ್ತಿನ ಗಮನ ಸೆಳೆದವರು ಅಂಬೇಡ್ಕರ್ ಎಂದು ಬಣ್ಣಿಸಿದರು.
ಸಾಹಿತಿ ಡಾ. ಬಿ.ಟಿ. ಲಲಿತಾನಾಯಕ್ ಅವರು ಡಾ. ಅಂಬೇಡ್ಕರ್ ವಿಚಾರಧಾರೆ ಕುರಿತು ಉಪನ್ಯಾಸ ನೀಡಿ, ಮಾನಸಿಕ ದಾಸ್ಯದಿಂದ ಹೊರ ಬಂದಾಗ ಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ. ಅಸಮಾನತೆ ತೊಲಗದೆ ದೇಶದ ಸಮಗ್ರ ಅಭಿವೃದ್ಧಿ ಅಸಾಧ್ಯ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷಕುಮಾರ್‌ಶೆಟ್ಟಿ, ಸಿಪಿಐಎಂಎಲ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ರುದ್ರಯ್ಯ, ಜಿಪಂ ಮಾಜಿ ಸದಸ್ಯೆ ರಾಧಾ ಸುಂದರೇಶ್, ಪರಿವರ್ತನ ಚಳವಳಿಯ ಮುಖಂಡ ಕೆ.ಟಿ. ರಾಧಾಕೃಷ್ಣ, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿದರು. ರಾಜಪ್ಪ ಮಾದರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಂದು ಪ್ರಾರ್ಥಿಸಿದರು. ಮಲ್ಲಿಗೆ ಸುಧೀರ್ ಹಾಗೂ ಸುಧೀರ್ ನಾಡಗೀತೆ, ರೈತಗೀತೆ ಹಾಡಿದರು. ಉಮೇಶ್ ಸ್ವಾಗತಿಸಿದರು. ಪುಟ್ಟಸ್ವಾಮಿ ವಂದಿಸಿದರು. ಬೆಳಗ್ಗೆ ನಗರ ಬಸ್ ನಿಲ್ದಾಣ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಯನ್ನು ವಿಧಾನ ಪರಿಷತ್ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಉದ್ಘಾಟಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಸರ್ಕಾರದಿಂದ ಉತ್ತರ ಕೇಳುವುದು ಅರಾಜಕತೆಯಲ್ಲ: ಜೈಲಿಗೂ ಹೋಗಲು ಸಿದ್ಧ; CJP ತಿರಂಗಾ ಮೆರವಣಿಗೆಗೂ ಮುನ್ನ ಅಭಿಜೀತ್ ದೀಪ್ಕೆ!

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು