ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ
ಕೆಲವು ಗುತ್ತಿಗೆದಾರರು ನಿಗಧಿತ ಅವಧಿಯೊಳಗೆ ಕಾಮಗಾರಿ ಕೈಗೆತ್ತಿಕೊಳ್ಳದೆ ಇರುವ ವಿಷಯದ ಬಗ್ಗೆ ಚರ್ಚೆ ನಡೆದಾಗ, ಕೆಲವು ಗುತ್ತಿಗೆದಾರರು ಅತ್ಯಂತ ಕಡಿಮೆ ದರದಲ್ಲಿ ಟೆಂಡರ್ ಹಾಕುತ್ತಿದ್ದಾರೆ. ಅವರಿಗೆ ಟೆಂಡರ್ ಆಗಿದ್ದರೂ ಸಕಾಲದಲ್ಲಿ ಕಾಮಗಾರಿ ಪ್ರಾರಂಭಿಸುತ್ತಿಲ್ಲ. ಅಂತಹ ಗುತ್ತಿಗೆದಾರರ ಇಎಂಡಿ ಹಣ ಮುಟ್ಟುಗೋಲು ಹಾಕಿಕೊಳ್ಳಬೇಕು. ಜತೆಗೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ಅಂತಹ ಗುತ್ತಿಗೆದಾರರು ಎರಡನೇ ಬಾರಿ ಟೆಂಡರ್ನಲ್ಲಿ ಭಾಗವಹಿಸದಂತೆ ಎಚ್ಚರ ವಹಿಸಬೇಕೆಂದು ಸಿ.ಟಿ. ರವಿ ಸಲಹೆ ನೀಡಿದಾಗ, ಅಂತಹವರ ಹೆಸರನ್ನು ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗುವುದು ಎಂದು ಜಿಪಂ ಸಿಇಒ ತಿಳಿಸಿದರು.