ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ

Rashmi Kasaragodu
Updated On : 5 Aug 2014, 1:18 am

ಚಿಕ್ಕಮಗಳೂರು: ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾದ ಮಳೆಯಿಂದಾಗಿ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ 180 ಅಡಿಗೆ ತಲುಪಿದ್ದು, ಒಳಹರಿವಿನ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 186 ಅಡಿಗೆ ತಲುಪಲಿದೆ. ಆದ್ದರಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಭದ್ರಾ ನದಿಗೆ ಹರಿಯಬಿಡಲಾಗುವುದು. ಭದ್ರಾ ನದಿಯ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕೆಂದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement