ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಛಾಯಾಗ್ರಾಹಕರ ಸಂಘ ಪ್ರತಿಭಟನೆ

Srinivasa Murthy VN
Updated On : 5 Feb 2014, 11:05 am

ಚಿಕ್ಕಮಗಳೂರು: ಸರ್ಕಾರಿ ನೌಕರರು, ತಮ್ಮ ಕೆಲಸದ ಜತೆಗೆ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿದ್ದು, ಅದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ತಾಲೂಕು ಛಾಯಾಗ್ರಾಹಕರ ಸಂಘ ಜಿಲ್ಲಾಧಿಕಾರಿ ಶೇಖರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.
ಕೆಲವು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಕೆಲವು ಶಿಕ್ಷಕರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪೋಟೋಗಳನು ತೆಗೆಯುತ್ತಿದ್ದಾರೆ. ಇದರಿಂದಾಗಿ ಇದೇ ವೃತ್ತಿಯನು ಅವಲಂಬಿತ ಛಾಯಾಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ಛಾಯಾಗ್ರಾಹಕರ ಸಂಘದ ಸದಸ್ಯರಿಗೆ ಸರ್ಕಾರದಿಂದ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ ಮಾಡಬೇಕು. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ಪೋಟೋ ಮತ್ತು ವೀಡಿಯೋ ಚಿತ್ರೀಕರಣವನು ಸಂಘದ ಸದಸ್ಯ ಛಾಯಾಗ್ರಾಹಕರಿಗೆ ನೀಡಬೇಕು, ಛಾಯಾಗ್ರಾಹಕರಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಬೇಕು, ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜಯಚಂದ್ರ, ಪ್ರಧಾನ ಕಾರ್ಯದರ್ಶಿ ರೇಣುಕಾ, ರವಿ, ಸೋಮಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement