ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ನೊಂದ ಮಹಿಳೆಯರಿಗೆ ನೆರವು ಅಗತ್ಯ'

Srinivasa Murthy VN
Updated On : 5 Feb 2014, 11:08 am

ಚಿಕ್ಕಮಗಳೂರು: ನೊಂದ ಮಹಿಳೆಯರಿಗೆ ನೆರವು ನೀಡುವುದರ ಜೊತೆಗೆ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಕರೆ ನೀಡಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ವಲಯದಡಿ ಅನುಷ್ಠಾನಗೊಳಿಸಿರುವ ಸಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದೌರ್ಜನ್ಯ ಹಾಗೂ ಅತ್ಯಾಚಾರಕ್ಕೊಳಗಾಗಿ ನೊಂದ ಮಹಿಳೆಯರಿಗೆ ನೆರವು ನೀಡುವುದರ ಜೊತೆಗೆ ಸಾಮಾಜಿಕ ಪಿಡುಗುಗಳಾದ ವರದಕ್ಷಿಣೆ, ಬಾಲ್ಯ ವಿವಾಹ, ಜೀತ ಪದ್ಧತಿ, ಬಾಲ ಕಾರ್ಮಿಕ ಹಾಗೂ ಮತ್ತಿತರ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸುವಂತಹ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.
ಸಂತ್ವಾನ ಯೋಜನೆಗಳ ಮೂಲಕ ಸಹಾಯ ಕೋರಿ ಬಂದಂತಹ ಪ್ರಕರಣಗಳನ್ನು ಜಿಲ್ಲಾ ಸಮಿತಿಯು ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದ ಅವರು, ಸಂತ್ವಾನ ಕೇಂದ್ರಗಳಲ್ಲಿ ನೋಂದಾಯಿಸಲ್ಪಟ್ಟ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆಗಳನ್ನು ಹಾಗೂ ಕುಶಲತೆಯ ಬಗ್ಗೆ ತರಬೇತಿ ನೀಡಿ ಅವರಿಗೆ ಆರ್ಥಿಕ ಸದೃಢರನ್ನಾಗಿ ಮಾಡಬೇಕೆಂದು ತಿಳಿಸಿದರು.
ನೊಂದ ಮಹಿಳೆಯರ ಪರಿಹಾರಕ್ಕೆ ಸಂತ್ವಾನ ವ್ಯವಸ್ಥೆ ಇದೆ, ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ತಿಳಿಯುವ ಹಾಗೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕೆಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಸವರಾಜ್, ಕಸ್ತೂರಿ ಬಾ ಸದನ ಸಂತ್ವಾನ ಕೇಂದ್ರದ ಕಾರ್ಯದರ್ಸಿ ಮೋಹಿನಿ ಸಿದ್ದೇಗೌಡ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಡಿ.ಎಸ್. ಮಮತಾ ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement