ಕುಡಿವ ನೀರಿನ ಸೌಲಭ್ಯಕ್ಕೆ ಚಾಲನೆ
ಬಾಳೆಹೊನ್ನೂರು: ಸಮೀಪದ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಬೂರು ಕಾಲೋನಿಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಿಂದ ನಿರ್ಮಿಸಿದ 6 ಲಕ್ಷ ವೆಚ್ಚದ ಕುಡಿಯುವ ನೀರಿನ ಸಂಪರ್ಕವನ್ನು ಜಿ.ಪಂ. ಸದಸ್ಯ ನಾಗರಾಜ್ ಇತ್ತೀಚೆಗೆ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮಸ್ಥರು ನೀರಿನ ಮಿತಬಳಕೆ, ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು. ಸರಿಯಾದ ಸಮಯದಲ್ಲಿ ಪಂಚಾಯಿತಿಗೆ ನೀರಿನ ಕರ, ಮತ್ತಿತರ ಕರಗಳನ್ನು ಪಾವತಿಸಬೇಕು ಎಂದರು.
ನರಸಿಂಹರಾಜಪುರ ತಾಲೂಕು ರೈತಮೋರ್ಚಾ ಅಧ್ಯಕ್ಷ ಮಣಬೂರು ರಾಜು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಖಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ರೈತಮೋರ್ಚಾ ಉಪಾಧ್ಯಕ್ಷ ಹುಯಿಗೆರೆ ವಾಸು, ಗ್ರಾ.ಪಂ.ಅಧ್ಯಕ್ಷೆ ಸುನಂದ, ಸದಸ್ಯ ಬಿ.ಎಚ್. ಶಂಕರ್, ಖಾಂಡ್ಯ ಹೋಬಳಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಚನ್ ಹುಯಿಗೆರೆ, ಮಣಬೂರು ಮಹೇಶ್, ಸುರೇಂದ್ರ ಉಪಸ್ಥಿತರಿದ್ದರು.