'ಆಪ್ ನಕ್ಸಲ್ ಗುಂಪಿದ್ದಂತೆ'
ಹುಬ್ಬಳ್ಳಿ: ಆಮ್ ಆದ್ಮಿ ಪಾರ್ಟಿ ಒಂದು ನಕ್ಸಲೈಟ್ ಗುಂಪು ಇದ್ದಂತೆ. ಆಮ್ ಆದ್ಮಿಯ ಹಲವಾರು ಮುಖಂಡರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಎಂದು ರಾಜ್ಯಸಭೆ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ. ಎಂ. ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಮ್ ಆದ್ಮಿ ಮಧ್ಯಮ ವರ್ಗದ ವಿಶ್ವಾಸ ಕಳೆದುಕೊಂಡಿದೆ. ದಿನದಿಂದ ದಿನಕ್ಕೆ ಆಮ್ ಆದ್ಮಿ ಸಚಿವರ ಹಗರಣಗಳು ಬಯಲಾಗುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮಿತ್ರ ಪಕ್ಷಗಳಿಗೆ ಸಂಪೂರ್ಣ ಜಯ ದೊರೆಯಲಿದೆ. 272ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್ಡಿಎ ಮಿತ್ರ ಪಕ್ಷಗಳು ಗೆಲವು ಸಾಧಿಸಲಿವೆ. ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್ಡಿಎ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.