ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಒತ್ತುವರಿ ತೆರವಿಗೆ ಆಗ್ರಹಿಸಿ ಧರಣಿ

Rashmi Kasaragodu
Updated On : 11 Feb 2014, 1:48 am

ಚಿಕ್ಕಮಗಳೂರು: ತಾಲೂಕಿನ ಬಾಳೇಹಳ್ಳಿಯಲ್ಲಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಿ ಪರಿಶಿಷ್ಟ ಜಾತಿಯವರಿಗೆ ಮೀಸಲಿರುವಂತೆ ಆಗ್ರಹಿಸಿ ತಾಲೂಕು ಕಚೇರಿ ಎದುರು ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಮುಖಂಡರಾದ ಜಿ.ವಿ. ಮಂಜುನಾಥ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶಿವೇಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ಬಾಳೇಹಳ್ಳಿಯ ಪರಿಶಿಷ್ಟ ಜಾತಿ ಜನಾಂಗಕ್ಕೆ 3 ಎಕರೆ ಮೀಸಲಿಟ್ಟು ಅಧಿಕಾರಿಗಳು ನಕ್ಷೆಯನ್ನು ತಯಾರಿಸಿದ್ದರು. ಆದರೆ, ಈ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ನಿರ್ಮಾಣ ಮಾಡಿಕೊಂಡಿದ್ದಾರೆ. ಇದರ ಜತೆಗೆ ಈ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಒತ್ತುವರಿಯನ್ನು ಖುಲ್ಲಾಗೊಳಿಸಿ ಪರಿಶಿಷ್ಟ ಜಾತಿಯವರಿಗೆ ಈ ಜಾಗವನ್ನು ಮೀಸಲಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಕಸಾಪ ಸದಸ್ಯತ್ವ ನೋಂದಣಿ: ಸೂಚನೆ
ಕಡೂರು:  ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ನೋಂದಣಿ ಪ್ರಾರಂಭವಾಗಿದೆ. ಆಸಕ್ತರು ತಮ್ಮ ಸದಸ್ಯತ್ವವನ್ನು ಪಡೆಯಬಹದು ಎಂದು ಕಡೂರು ತಾಲೂಕು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ. ಪರಿಷತ್ತಿನ ಆಜೀವ ಸದಸ್ಯತ್ವ ಹೊಂದಲು ಬಯಸುವ ವ್ಯಕ್ತಿಗಳಿಗೆ ಕನ್ನಡ ಮಾತನಾಡಲು, ಓದಲು, ಬರೆಯಲು ಬರಬೇಕು. ಅಂತಹ ವ್ಯಕ್ತಿಗಳು ತಮ್ಮ ಇತ್ತೀಚಿನ 2 ಭಾವಚಿತ್ರ, ಸದಸ್ಯತ್ವ ಶುಲ್ಕ 265 ಅನ್ನು ಪಾವತಿಸಿ ಸದಸ್ಯತ್ವ ಪಡೆಯಬಹುದು ಎಂದು ತಿಳಿಸಿದ್ದಾರೆ.
ತರೀಕೆರೆಯಲ್ಲಿ ಮನೆ ಮನೆಗೆ ಬಿಜೆಪಿ ಕಾರ್ಯಕ್ರಮ
ತರೀಕೆರೆ: ಭಾರತೀಯ ಜನತಾ ಪಾರ್ಟಿ ವತಿಯಿಂದ ಪಟ್ಟಣದಲ್ಲಿ ಮನೆ ಮನೆಗೆ ಬಿಜೆಪಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಮನೆ ಮನೆಗೆ ಬಿಜೆಪಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಎಲ್ಲರೂ ಪಕ್ಷಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.
ಪಕ್ಷದ ಮುಖಂಡರಾದ ಆರ್.ದೇವಾನಂದ್ ಮಾತನಾಡಿ, ಭಾರತ ಉಳಿಸಿ ಅಭಿಯಾನದಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಿ ಭಾರತ ಗೆಲ್ಲಿಸಿ ಎಂದು ಅವರು ಮನವಿ ಮಾಡಿದರು. ಮುಖಂಡರಾದ ಟಿ.ಎಂ.ಭೋಜರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ಜಿ.ಸದಾನಂದ್, ರೇಣುಕಪ್ಪ, ವಿಜಯ್, ಸುನೀಲ್, ಶ್ರೇಯಸ್, ಶಾರದ ಉಡುಪರ್, ನೀಲಮ್ಮ ಹಾಗು ನಗರ ಶಕ್ತಿ ಕೇಂದ್ರದ ಸದಸ್ಯರು  ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement