ಗ್ರಾಪಂ ಅಧ್ಯಕ್ಷೆಯಾಗಿ ಚಂದ್ರಮ್ಮ ಆಯ್ಕೆ
ಚಿಕ್ಕಮಗಳೂರು: ಸಖರಾಯಪಟ್ಟಣ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಚಂದ್ರಮ್ಮ, ಉಪಾಧ್ಯಕ್ಷರಾಗಿ ಎಸ್.ಬಿ. ಲೋಕೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿ ಅದರಲ್ಲಿ ಯಶಸ್ವಿಯಾದ ನಂತರ ಖಾಲಿಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಚಂದ್ರಮ್ಮ, ಉಪಾಧ್ಯಕ್ಷರಾಗಿ ಎಸ್.ಬಿ. ಲೋಕೇಶ್ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಕಡೂರು ತಾಲೂಕು ಪಂಚಾಯ್ತಿಯ ಕಾರ್ಯನಿರ್ವಹಣಾಧಿಕಾರಿ ಮೂಕಪ್ಪಗೌಡ ಘೋಷಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ಈ ಭಾಗದಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಗಾಲ ಹೆಚ್ಚಾಗಿದೆ. ಜೊತೆಗೆ ಜಾನುವಾರುಗಳಿಗೂ ಉಳಿಸಿಕೊಳ್ಳಬೇಕೆಂದರು. ಈ ಸಂದರ್ಭ ಆರ್.ಚಂದ್ರಶೇಖರ್, ಜಿ.ಪಂ. ಮಾಜಿ ಉಪಾಧ್ಯಕ್ಷ ಎನ್.ಎಸ್. ಚಂದ್ರಪ್ಪ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಯೋಗೇಂದ್ರ ಎಪಿಎಂಸಿ ಮಾಜಿ ಅಧ್ಯಕ್ಷ ಶ್ರೀನಿವಾಸ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಗೇಗೌಡ, ಕಾವೇರಿ ಗ್ರಾಮೀಣ ಬ್ಯಾಂಕಿನ ನಿರ್ದೇಶಕ ಮೋಹನ್, ಮುಖಂಡ ಕಲ್ಮುರುಡಪ್ಪ ಉಪಸ್ಥಿತರಿದ್ದರು.