ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕರ್ನಾಟಕ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಚಾಲನೆ

Rashmi Kasaragodu
Updated On : 13 Feb 2014, 11:46 am

ಚಿಕ್ಕಮಗಳೂರು: ನಗರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ಕರ್ನಾಟಕ ಬ್ಯಾಂಕ್ ತನ್ನ ನೂತನ ಎಟಿಎಂ ಕೇಂದ್ರವನ್ನು ಬುಧವಾರ ಆರಂಭಿಸಿತು.
ನೂತನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ವಿ. ಮಂಜುನಾಥ್, ಬ್ಯಾಂಕ್‌ಗಳು ಗ್ರಾಹಕರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಅವರ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕಿವಿಮಾತು ಹೇಳಿದರು. ಬ್ಯಾಂಕ್ ಅಧಿಕಾರಿಗಳು ಗ್ರಾಹಕರನ್ನು ತಮ್ಮ ಸ್ನೇಹಿತರಂತೆ ಕಂಡಾಗ ಮಾತ್ರ ಸಂಸ್ಥೆ ಬೆಳೆಯುತ್ತದೆ ಎಂದ ಅವರು, ಗ್ರಾಹಕರೂ ಸಹ ಬ್ಯಾಂಕ್‌ಗಳಲ್ಲಿ ದೊರೆಯುವ ಸಾಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ಮಾಡಿದರು.
ಬ್ಯಾಂಕ್‌ನ ಶಿವಮೊಗ್ಗ ವಲಯದ ಸಹಾಯಕ ಮಹಾ ಪ್ರಬಂಧಕ ರಂಗನಾಥ್ ಮಾತನಾಡಿ, ಬಡಜನರು ಮತ್ತು ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ತಮ್ಮ ಬ್ಯಾಂಕ್ ಬಹಳಷ್ಟು ಶ್ರಮ ವಹಿಸುತ್ತಿದ್ದು ಅವರಿಗಾಗಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿವೆ ಎಂದು ತಿಳಿಸಿದರು.
ಹಿರಿಯ ಶಾಖಾ ಪ್ರಬಂಧಕ ಡಾ. ಟಿ.ಆರ್. ಅರುಣ್ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement