ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾವಂತರಾಗಿ ಶೋಷಣೆ ತಡೆಗಟ್ಟಿ: ಅಂಬಿಕಾ

Rashmi Kasaragodu
Updated On : 13 Feb 2014, 11:46 am

ಚಿಕ್ಕಮಗಳೂರು: ದೌರ್ಜನ್ಯ, ಶೋಷಣೆ ಮತ್ತು ಬಡತನದಿಂದ ಮುಕ್ತರಾಗಿ ನೆಮ್ಮದಿಯಿಂದ ಬದುಕುವಂತಾಗಲು ಶಿಕ್ಷಣ ಅತ್ಯಗತ್ಯ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಶಿವಕುಮಾರ್ ಹೇಳಿದ್ದಾರೆ.
ತಾಲೂಕಿನ ಅಲ್ಲಂಪುರದ ಕುವೆಂಪು ಶತಮಾನೋತ್ಸವ ಶಾಲೆಯಲ್ಲಿ ಬುಧವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಿ ಅವರು ಮಾತನಾಡಿದರು.
ಮನುಷ್ಯ ವಿದ್ಯಾವಂತನಾದರೆ ಮಾತ್ರ ಆತನಿಗೆ ಸಮಾಜದಲ್ಲಿ ಗೌರವ ಅಂತಸ್ತು ಮತ್ತು ಸ್ಥಾನಮಾನ ದೊರೆಯುತ್ತದೆ ಎಂದ ಅವರು, ವಿದ್ಯಾರ್ಥಿಗಳು ಇದನ್ನು ಅರಿತು ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಬೇಕು, ಪೋಷಕರೂ ಸಹ ತಮಗೆ ಎಷ್ಟೇ ಕಷ್ಟವಾದರೂ ಬಿಡದೆ ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು ಎಂದು ಕಿವಿ ಮಾತು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯ ರಂಗನಾಥ್ ಮಾತನಾಡಿ, ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ನೆರವು ಮತ್ತು ಸವಲತ್ತುಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗಿ ಹೊರಹೊಮ್ಮಬೇಕು ಎಂದು ಸಲಹೆ ಮಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊನ್ನಪ್ಪಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷೆ ಶೋಭಾ, ಸದಸ್ಯರಾದ ಅಣ್ಣೇಗೌಡ, ಗಣೇಶ್, ರಮೇಶ್, ರೇಖಾ, ರಶ್ಮಿ, ಗ್ರಾಮ ಪಂಚಾಯಿತಿ ಸದಸ್ಯ ಹಾಲಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement