ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆಯಿಂದ ಕೃಷಿಮೇಳ

Lingaraj Badiger
Updated On : 17 Feb 2014, 11:10 am

ಕಡೂರು:  ಫೆ. 18ಹಾಗು 19ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕಡೂರು ಸಮೀಪದ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ಸನ್ನಿಧಿಯಲ್ಲಿ ತಾಲೂಕು ಮಟ್ಟದ ಕೃಷಿಮೇಳ ಜರುಗಲಿದೆ ಎಂದು ಯೋಜನೆಯ ತಾಲೂಕು ಸಂಯೋಜನಾಧಿಕಾರಿ ಎ.ದಿನೇಶ್ ತಿಳಿಸಿದ್ದಾರೆ.
 ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮಾಭಿವೃದ್ದಿ ಯೋಜನೆ, ಹಿರೇನಲ್ಲೂರು ವಲಯದ ತಾಲೂಕು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ,ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ಸನ್ನಿಧಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಕೃಷಿ ಉತ್ಸವ ನಡೆಯಲಿದೆ.
ಫೆ. 18 ರಂದು ಕಡೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ.ಎಸಸ್ವಿ ದತ್ತರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು. 19ರ ಬುಧವಾರದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಪ್ರದರ್ಶನ, ಯಂತ್ರೋಪಕರಣ ಪ್ರದರ್ಶನ, ವಿಚಾರಗೋಷ್ಟಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement