25 ರಂದು ಬಜರಂಗದಳ ಪ್ರತಿಭಟನೆ
ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಫೆ.17
ದೇಶದೊಳಗೆ ಅಕ್ರಮವಾಗಿ ನುಸುಳಿರುವ ಬಾಂಗ್ಲಾ ನುಸುಳುಕೋರರನ್ನು ಕೂಡಲೇ ದೇಶದಿಂದ ಹೊರಹಾಕಬೇಕೆಂದು ಆಗ್ರಹಿಸಿ ಫೆ. 25 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಜರಂಗದಳ ಪ್ರಾಂತ ಸುರಕ್ಷಾ ಪ್ರಮುಖ ಖಾಂಡ್ಯ ಪ್ರವೀಣ್ ಹೇಳಿದ್ದಾರೆ.
ಅಂದು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಈ ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ ರಾಜ್ಯ ಕಾರ್ಯದರ್ಶಿ ಕೇಶವ ಹೆಗಡೆ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಇತ್ತೀಚೆಗೆ ಉಡುಪಿಯಲ್ಲಿ ವಿನಾಕಾರಣ ಬಜರಂಗದಳ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯದಿದ್ದಲ್ಲಿ ಫೆ. 21 ರಂದು ಮಂಗಳೂರು, ಶಿವಮೊಗ್ಗ ವಿಭಾಗಗಳಿಂದ ಕಾರ್ಯಕರ್ತರು ಉಡುಪಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಯೋಗೀಶ್ ಅರಸ್, ಆಲ್ದೂರು ಮಂಜು ಉಪಸ್ಥಿತರಿದ್ದರು.