ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

Lingaraj Badiger
Updated On : 18 Feb 2014, 12:04 pm

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಕಸ್ತೂರಿ ಬಾ ಸದನದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
 ಗ್ರಾಮಾಂತರ ಪ್ರದೇಶಗಳಲ್ಲಿ ಕಳಪೆ ಮದ್ಯವನ್ನು ಮನೆ ಮನೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿದರು.
ನಗರದಲ್ಲಿಯೂ ಸಹ ಬಾರ್‌ಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಶಾಲಾ, ಕಾಲೇಜುಗಳು ಮತ್ತು ಪ್ರಾರ್ಥನಾ ಮಂದಿರಗಳ ಸಮೀಪದಲ್ಲಿ ಬಾರ್‌ಗಳನ್ನು ತೆರೆಯಬಾರದೆಂಬ ಕಾನೂನು ಇದ್ದರೂ ಸಹ ಹಲವಾರು ಬಾರ್‌ಗಳು ಈ ನಿಯಮಕ್ಕೆ ವಿರುದ್ಧವಾಗಿ ತಲೆ ಎತ್ತಿವೆ. ಇವುಗಳನ್ನು ನಿಯಂತ್ರಿಸಲು ಮುಂದಾಗಬೇಕೆಂದು ಆಗ್ರಹಿಸಿದರು.
 ಸುದ್ದಿಗೋಷ್ಠಿಯಲ್ಲಿ ಕಸ್ತೂರಿ ಬಾ ಸದನದ ಅಧ್ಯಕ್ಷೆ ಎಂ.ಎಸ್. ರಾಜೇಶ್ವರಿ, ಖಜಾಂಚಿ ಜಯಶ್ರೀ ನಂಜರಾಜ್, ಯಮುನಾ ಚನ್ನಬಸಪ್ಪ ಶೆಟ್ಟಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement