ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗ್ರಾಮ ಸ್ವಚ್ಛತೆಯಿಂದ ರೋಗ ನಿಯಂತ್ರಣ

Lingaraj Badiger
Updated On : 18 Feb 2014, 12:07 pm

ಕ.ಪ್ರ.ವಾರ್ತೆ, ಮೂಡಿಗೆರೆ, ಫೆ.17
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಅನೇಕ ರೋಗ ತಡೆಯಬಹುದು ಎಂದು ತಾಲೂಕು ಪಂಚಾಯಿತಿ ಸದಸ್ಯ ರಂಜನ್ ಅಜಿತ್‌ಕುಮಾರ್ ಹೇಳಿದರು.
ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಕ್ಷರ ದಾಸೋಹ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು 2013- 14ನೇ ಸಾಲಿನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶುಚಿತ್ವ, ಮಿತವ್ಯಯ, ಪೌಷ್ಟಿಕಾಂಶಗಳು ಹಾಗೂ ಸುರಕ್ಷೆ ಅಕ್ಷರ ದಾಸೋಹ ಕಾರ್ಯಕ್ರಮದ ಮುಖ್ಯ ಅಂಶಗಳಾಗಿದೆ ಎಂದರು.
ಸಬ್ಲೀ ದೇವರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಅನಂತು ಮಾತನಾಡಿದರು. ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೋಮರಯ್ಯ, ಬಿಆರ್‌ಸಿಯ ತಾರಾನಾಥ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರುದ್ರಪ್ಪ ಆರೋಗ್ಯಾಧಿಕಾರಿ, ಅಗ್ನಿಶಾಮಕ ದಳದ ಅಧಿಕಾರಿ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಶಿಬಿರ
ನರಸಿಂಹರಾಜಪುರ: ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಫೆ. 18ರ ಮಂಗಳವಾರದಿಂದ 7 ದಿನಗಳ ಕಾಲ ಕುದುರೆಗುಂಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಕಾಲೇಜಿನ ಎನ್‌ಎಸ್‌ಎಸ್ ಶಿಬಿರಾಧಿಕಾರಿ ಎಸ್.ಎ. ನರಸಿಂಹ ತಿಳಿಸಿದ್ದಾರೆ.
ಶ್ರಮದಾನ ಮತ್ತಿತರ ಚಟುವಟಿಕೆಗಳು ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನಡೆಯಲಿದ್ದು, ಪ್ರತಿದಿನ ಸಂಜೆ ಸಭಾ ಕಾರ್ಯಕ್ರಮವು ಅಶ್ವಗುಂಡೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ.
ಮಂಗಳವಾರ ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಡಿ.ಎನ್. ಜೀವರಾಜ್ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಸಿ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement