ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಲವಂತದ ವಿದ್ಯೆ ಕೊಡಿಸದಿರಿ

Vishwanath S
Updated On : 25 Feb 2014, 11:36 am

ಕ.ಪ್ರ.ವಾರ್ತೆ ,  ಕಡೂರು ,  ಫೆ. 24
ಪೋಷಕರು ತಮ್ಮ ಮಕ್ಕಳ ಮೇಲೆ ಇಟ್ಟುಕೊಂಡಿರುವ ಕನಸನ್ನು ನನಸಾಗಬೇಕಾದರೆ ಬಲವಂತದ ವಿದ್ಯೆ ಕೊಡಿಸದೆ ಅವರಿಗೆ ಆಸಕ್ತಿ ಇರುವ ವಿಷಯಕ್ಕೆ ಪ್ರೋತ್ಸಾಹ ನೀಡಿದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಬಿ. ರಾಜಪ್ಪ ಹೇಳಿದರು.
ಅವರು ಕಡೂರು ಪಟ್ಟಣದ ಬಿಜಿಎಸ್ ವಿದ್ಯಾ ಸಂಸ್ಥೆ ಆಯೋಜಿಸಿದ್ದ ಬಿಜಿಎಸ್ ಉತ್ಸವದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಆಧುನಿಕ ಮತ್ತು ತಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಮುಕ್ತ ಸ್ವಾತಂತ್ರ್ಯ ಕೊಡದೆ ಬಲವಂತದ ವಿದ್ಯೆ ಹೇರಿಕೆ ಮಾಡಲಾಗುತ್ತಿದೆ. ಇದರಿಂದ ಮಕ್ಕಳು ವಿದ್ಯೆ ಕಲಿಯವಲ್ಲಿ ಹಿಂದೆ ಬೀಳುವ ಮೂಲಕ ಯಶಸ್ಸು ಗಳಿಸುವಲ್ಲಿ ವಿಫಲರಾಗುತ್ತಾರೆ ಎಂದರು.
ಸಾನ್ನಿಧ್ಯ ವಹಿಸಿದ್ದ ಗುಣನಾಥ ಶ್ರೀ ಆಶೀರ್ವಚನ ನೀಡಿ, ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಇಂತಹ ಕಾರ್ಯಕ್ರಮ ಅಗತ್ಯವಿದೆ.
ಬಾಲಗಂಗಾಧರನಾಥ ಸ್ವಾಮೀಜಿಗಳ ಆಶಯದಂತೆ ಶಾಲೆ ತೆರೆದು ಶಿಕ್ಷಣ,ಪರಂಪರೆ, ಧರ್ಮ ಸಂಸ್ಕಾರ ನೀಡುವ ಕೆಲಸ ಮಾಡುವ ಉದ್ದೇಶ ಹೊಂದಿ ಜ್ಞಾನ ದಾಸೋಹ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಚಿಕ್ಕಮಗಳೂರಿನ ಉಪನ್ಯಾಸಕ ಚಂದ್ರಾನಾಯ್ಕ, ಬಿಜಿಎಸ್ ಸಂಸ್ಥೆ ಆಡಳಿತಾಧಿಕಾರಿ ಸುಮಿತ್ರಮ್ಮ, ಶಾಲೆಯ ಶಿಕ್ಷಕರು ಪೋಷಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement