ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

Rashmi Kasaragodu
Updated On : 4 Jan 2014, 11:45 am

ನರಸಿಂಹರಾಜಪುರ: ಪಟ್ಟಣದ ಟಿ.ಬಿ. ರಸ್ತೆಯ ಚೈತನ್ಯ ಕ್ರಿಕೆಟರ್ಸ್ ಆಶ್ರಯದಲ್ಲಿ ಚೈತನ್ಯ ಯುವಕ ಸಂಘದ ದಶಮಾನೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಜ.4ರಿಂದ 3 ದಿನಗಳ ಕಾಲ ಕುವೆಂಪು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಚೈತನ್ಯ ಯುವಕ ಸಂಘದ ಅಧ್ಯಕ್ಷ ಪ್ರಶಾಂತಶೆಟ್ಟಿ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 25,555 ಹಾಗೂ ಪಾರಿತೋಷಕ, ದ್ವಿತೀಯ ಸ್ಥಾನಕ್ಕೆ 15,555 ಮತ್ತು ಪಾರಿತೋಷಕ ನೀಡಲಾಗುತ್ತದೆ. ಜೊತೆಗೆ ಸರಣಿ ಸರ್ವೋತ್ತಮ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ. ಸೋಮವಾರ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ 30 ಹಿರಿಯ ಆಟಗಾರರನ್ನು ಸನ್ಮಾನಿಸಲಾಗುತ್ತದೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರವೇ ರಾಜ್ಯಾಧ್ಯಕ್ಷ ಟಿ.ನಾರಾಯಣಗೌಡ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ- 9886135989, 9980462080 ಸಂಪರ್ಕಿಸಬಹುದು.
6 ಸರ್ಟಿಫಿಕೇಟ್ ಕೋರ್ಸ್ ಪ್ರಾರಂಭ
ತರೀಕೆರೆ: ಪಟ್ಟಣದ ಎಸ್ ಜೆಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೈಕ್ಷಣಿಕ ಸಾಲಿನಲ್ಲಿ ಕುವೆಂಪು ವಿವಿ ಅನುಮೋದನೆಗೊಳಪಟ್ಟ ಯೋಗ ಅಧ್ಯಯನ, ಕಂಪ್ಯೂಟರ್ ಅಪ್ಲಿಕೇಶನ್ ಪತ್ರಿಕೋದ್ಯಮ, ಬಸವ ಅಧ್ಯಯನ, ಗಾಂಧಿ ಅಧ್ಯಯನ ಮತ್ತು ಕಮ್ಯೂನಿಟೀವ್ ಇಂಗ್ಲಿಷ್ ವಿಷಯಗಳಿಗೆ ಸಂಬಂಧಿಸಿದಂತೆ ಆರು ಸರ್ಟಿಫಿಕೇಟ್ ಕೋರ್ಸುಗಳನ್ನು ಪ್ರಾರಂಭಿಸಲಾಗಿದೆ ಎಂದು ಪ್ರಾಚಾರ್ಯ ಕೆ.ವಿ. ಸಜ್ಜನ ಶೆಟ್ಟರ್ ತಿಳಿಸಿದ್ದಾರೆ. ಪಿಯುಸಿ ಪಾಸಾಗಿ ಯಾವುದೇ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕಾಲೇಜು ಕಚೇರಿ ದೂ- 08261-222330 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಮಟ್ಟಕ್ಕೆ ಶ್ರೀಗೌರಿ ಆಯ್ಕೆ
ತರೀಕೆರೆ: 9ನೇ ತರಗತಿ ವಿದ್ಯಾರ್ಥಿನಿ ತರೀಕೆರೆ ಶ್ರೀಗೌರಿ ಅವರು ಅಂಗ್ಲ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಬಿಜಾಪುರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಶ್ರೀಗೌರಿ ಕಳೆದ ಬಾರಿಯೂ ಗುಲ್ಬರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ಆಂಗ್ಲ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಚೇತರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement