ಮನೆಗೆ ಬೆಂಕಿಬಿದ್ದು ಲಕ್ಷಾಂತರ ರು. ಹಾನಿ
ನರಸಿಂಹರಾಜಪುರ: ಸಿಂಸೆ ಗ್ರಾಮದ ಬೋವಿ ಕಾಲೋನಿಯ ಶಿಬು ಎಂಬುವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿ ಅಂದಾಜು 2 ಲಕ್ಷ ನಷ್ಚವಾದ ಘಟನೆ ಶುಕ್ರವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ.
ಶಿಬು ಮತ್ತು ಅವರ ಪತ್ನಿಯು ಕೂಲಿ ಕೆಲಸಕ್ಕೆಂದು ಹೊರಗೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದು ಬೆಳಗಿನ 10 ಗಂಟೆಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಕ್ಕಪಕ್ಕದ ಮನೆಯವರು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಲ್ಲದೆ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಶ್ರಮಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.
ಕಾರಿಗೆ ಬೆಂಕಿ: ಬಂಧನ
ಶೃಂಗೇರಿ: ಪಟ್ಟಣದ ಮುಖ್ಯದ್ವಾರದ ಬಳಿ ಶುಕ್ರವಾರ ಬೆಳಗಿನ ಜಾವ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರೊಂದಕ್ಕೆ ಬೆಂಕಿ ಹಚ್ಚಿ ಸುಟ್ಟು ಪರಾರಿಯಾಗಿದ್ದ ಆರೋಪಿ ಅಸ್ಗರ್ ಅಲಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಶಿವಮೊಗ್ಗದತ್ತ ಪ್ರಯಾಣಿಸುತ್ತಿದ್ದಾಗ ಬಂಧಿಸಲಾಗಿದೆ.
ನೇಣು ಬಿಗಿದು ಆತ್ಮಹತ್ಯೆ
ಶೃಂಗೇರಿ: ತಾಲೂಕಿನ ಹೊಳೆಕೊಪ್ಪದಲ್ಲಿ ಬೊಗ್ಗು (65) ಎಂಬವರು ನೇಣು ಬಿಗಿದುಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.