ಅಧ್ಯಕ್ಷರಾಗಿ ಪ್ರಭಾಕರ್ ಆಯ್ಕೆ
ಚಿಕ್ಕಮಗಳೂರು: ನಗರದ ಬಸವನಹಳ್ಳಿ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಶ್ರೀ ರಾಮೋತ್ಸವ ಸೇವಾ ಸಮಿತಿ ಅಧ್ಯಕ್ಷರಾಗಿ ಕೆ.ಎನ್. ಪ್ರಭಾಕರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಎಸ್. ಶ್ರೀನಿವಾಸ್, ಖಜಾಂಚಿಯಾಗಿ ಬಿ.ಸಿ. ಜಯರಾಂ, ಸಹ ಕಾರ್ಯದರ್ಶಿಯಾಗಿ ಎಸ್.ಎನ್. ಪ್ರಕಾಶ್, ಸಂಘಟನಾ ಕಾರ್ಯದರ್ಶಿ ಬಿ.ಎಲ್. ದತ್ತಾತ್ರಿ ಹಾಗೂ ನಿರ್ದೇಶಕರುಗಳಾಗಿ ಹತ್ತು ಜನ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಾಲಯದಲ್ಲಿ ಸಮಿತಿಯ ಮುಖಂಡ ಹೆಚ್.ಕೆ. ನರಸಿಂಹಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
12 ರಂದು ಆಮ್ ಆದ್ಮಿ ಸಭೆ
ಆಮ್ ಆದ್ಮಿ ಪಕ್ಷದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ಪಕ್ಷದ ಕಚೇರಿಯಲ್ಲಿ ಜ.12 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಕಾರ್ಯಕಾರಿ ಸಮಿತಿಯನ್ನು ರಚಿಸುವುದರ ಜೊತೆಗೆ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಗುವುದು. ಇದೇ ವೇಳೆ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯ ಸಹ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಸಂಚಾಲಕ ಡಾ. ಸುಂದರಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.