ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಆರೋಪಿಗಳ ಗಡೀಪಾರಿಗೆ ಆಗ್ರಹ

Rashmi Kasaragodu
Updated On : 5 Jan 2014, 12:49 pm

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ನಿಷೇಧಿಸುವಂತೆ ಬಿಜೆಪಿ ಆಗ್ರಹಿಸಿದೆ.
ಅನ್ಯ ಕೋಮಿನ ವ್ಯಕ್ತಿಗಳು ಜಿಲ್ಲೆಯ ಶಾಂತಿಯನ್ನು ಹಾಳುಮಾಡುತ್ತಿದ್ದು ಇಂತವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ನಗರ ಬಿಜೆಪಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರು ಜಿಲ್ಲಾ ರಕ್ಷಣಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಹೆಸಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಭಾಷ್ ನಗರದ ಚೌಡೇಶ್ವರಿ ದೇವಾಲಯದ ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರದ ಕಟ್ಟಡವನ್ನು ದ್ವಂಸಗೊಳಿಸಿರುವುದನ್ನು ಖಂಡಿಸುತ್ತೇವೆ.
  ಹೆಸಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಬೆಳಗುಳ, ಬಾಬು ಮತ್ತು ಹಮೀದ್ ಮತ್ತು ಇನ್ನಿತರರು ಈ ದೇವಾಲಯದ ಕಮಾನನ್ನು ಧ್ವಂಸಗೊಳಿಸಿರುವುದು ದುರದೃಷ್ಟಕರ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಸಗಲ್ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಮಾನು ನಿರ್ಮಾಣ ಸಂದರ್ಭದಲ್ಲಿ ವ್ಯಕ್ತಿಗಳು ವಿರೋಧ ವ್ಯಕ್ತಪಡಿಸಿದ್ದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಆರ್. ಹಿರೇಮಠ್ ರವರು ಮುಂಜಾಗ್ರತವಾಗಿ ಅವರನ್ನು ಕರೆಸಿ ವಿಚಾರಣೆ ಮಾಡಿದ್ದರೆ ಶಾಂತಿ ಕದಡುವುದನ್ನು ತಪ್ಪಿಸಬಹುದಾಗಿತ್ತು. ಪೊಲೀಸ್ ಇಲಾಖೆಗೆ ಈ ಹಿಂದೆಯೇ ಮಾಹಿತಿ ಇದ್ದರೂ ಸಹ ವ್ಯಕ್ತಿಗಳ ಮೇಲೆ ಯಾವುದೇ ಕ್ರಮಕೈಗೊಳ್ಳದೇ ಇರುವುದನ್ನು ನೋಡಿದರೆ ಯಾವುದೋ ರಾಜಕೀಯ ವ್ಯಕ್ತಿಗಳು ಇವರ ಹಿಂದೆ ಇರುವುದು ಅನುಮಾನ ವ್ಯಕ್ತವಾಗಿದೆ. ಈ ಮೂವರು ಆರೋಪಿಗಳನ್ನು ಬಂಧಿಸಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೋಮು ಗಲಭೆಯ ಬಗ್ಗೆ ವಿಚಾರಣೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement