ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾರಿಗೆ ಬೆಂಕಿ ಹಚ್ಚಿದ ಆರೋಪಿ ಸೈಯದ್ ನ್ಯಾಯಾಂಗ ವಶಕ್ಕೆ

Rashmi Kasaragodu
Updated On : 5 Jan 2014, 12:48 pm

ಶೃಂಗೇರಿ: ಪಟ್ಟಣದಲ್ಲಿ ಕಾರೊಂದಕ್ಕೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಸೈಯದ್ ಎಂಬುವನನ್ನು ಪೋಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿ ಟಿಂಕರ್ ಸೈಯದ್ ಶುಕ್ರವಾರ ಬೆಳಗಿನ ಜಾವ 3 ಗಂಟೆಯ ವೇಳೆಯಲ್ಲಿ ವೆಲ್ಕಂ ಗೇಟ್ ಬಳಿ ಅಸ್ಗರ್ ಆಲಿ ಎಂಬುವವರ ನಿವಾಸದ ಎದುರು ನಿಲ್ಲಿಸಲಾಗಿದ್ದ ಮಾರುತಿ 800 ಕಾರಿನ ಗಾಜು ಒಡೆದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದನು.
 ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಕಾರಿನ ಮಾಲಿಕ ಅಸ್ಗರ್ ಅಲಿ ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪಿರ್ಯಾದುದಾರ ಹಾಗೂ ಆರೋಪಿ ಸೈಯದ್ ನಡುವಿನ ಹಳೆ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೋಲೀಸರು ಆರೋಪಿಯನ್ನು ಬೇಗಾರು ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement