ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪ್ರತಿಭಾ ಪ್ರದರ್ಶನಕ್ಕೆ ಪ್ರೋತ್ಸಾಹ ಅಗತ್ಯ

Rashmi Kasaragodu
Updated On : 5 Jan 2014, 12:48 pm

ಶೃಂಗೇರಿ:  ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ಮುಖ್ಯ ಗುರಿಯಾಗಿದ್ದರೂ ಪಠ್ಯೇತರ ಚಟುವಟಿಕೆಗಳಲ್ಲೂ ಪ್ರತಿಭಾ ಪ್ರದರ್ಶನ ಮೆರೆಯಬೇಕು ಎಂದು ಡಾ.ಅಣ್ಣಾದೊರೆ ಅಭಿಪ್ರಾಯಪಟ್ಟರು. ತಾಲೂಕಿನ ಬೇಗಾರು ಪಂಚಾಯಿತಿ ಬೇಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವಿಭಿನ್ನ ಸಾಮರ್ಥ್ಯಗಳಿದ್ದರೂ ಅವುಗಳು ಜನ್ಮದತ್ತವಾಗಿ ಬಂದಿರುತ್ತದೆ. ಅವುಗಳನ್ನು ಅನಾವರಣಗೊಳಿಸಬೇಕು.  ಆಗ ಮಾತ್ರ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರು, ಪೋಷಕರು ಮಹತ್ತರ ಪಾತ್ರ ವಹಿಸಬೇಕು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಟೇಶ್ ಅಧ್ಯಕ್ಷತೆ ವಹಿಸಿದ್ದರು. ಕೀರ್ತನಾ ಕೃಷ್ಣಮೂರ್ತಿ ಶಾಲಾ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಉಪನ್ಯಾಸಕಿ ಮನವಿ, ಮಹಮ್ಮದ್ ಇದ್ದರು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಕ್ರೀಡೆ, ಸಾಂಸ್ಕ ೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement