ಕಾಂಗ್ರೆಸ್ಗೆ ಕಾರ್ಯಕರ್ತರೆ ಶ್ರೀರಕ್ಷೆ
ಚಾಮರಾಜನಗರ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೆ ಶ್ರೀರಕ್ಷೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಗೆಲುವಿನ ನಾಗಲೋಟ ಮುಂದುವರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಂಬಂಧ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ, ಕೆಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದವರನ್ನು ಸ್ವಾಗತಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ತತ್ವ, ಸಿದ್ದಾಂತಗಳಿಗೆ ಹೆಚ್ಚು ಅದ್ಯತೆ ನೀಡುತ್ತದೆ. ಪಕ್ಷದ ಸಿದ್ದಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಮೂಲ ಹಾಗೂ ವಲಸೆ ಎಂಬ ಭಿನ್ನಾಪ್ರಾಯ ಬದಿಗೊತ್ತಿ, ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಹಾಗೂ ಮುಖಂಡರು ಸಜ್ಜಾಗಬೇಕು ಎಂದರು.
ಸರ್ಕಾರದ ಸಾಧನೆ: ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ವಿವಿಧ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಪಕ್ಷದಲ್ಲಿ ನಿಷ್ಟಾವಂತರಾಗಿ ದುಡಿದಿರುವರನ್ನು ಗುರುತಿಸಿ ಪ್ರಾತಿನಿಧ್ಯ ನೀಡಲಾಗುತ್ತದೆ. ವಿರೋಧ ಪಕ್ಷಗಳ ಟೀಕೆಗಳಿಗೆ ಸೂಕ್ತ ಉತ್ತರ ನೀಡಲು ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸರ್ಕಾರದ ಸಾಧನೆಗಳನ್ನು ಕುರಿತು ಗ್ರಾಮ ಹಾಗೂ ಮನೆ ಮನೆಗಳಿಗೆ ತೆರಳಿ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
10 ರಂದು ವೀರಪ್ಪ ಮೊಯಿಲಿ ಆಗಮನ: ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಜ. 10 ರಂದು 1.50 ಕೋಟಿ ರು.ಗಳ ವಿವಿಧ ಯೋಜನೆಗಳ ಅನುಷ್ಠಾನಗೊಳಿಸಲು ಕೇಂದ್ರ ಸಚಿವ ವೀರಪ್ಪ ಮೊಯಿಲಿ ನಗರಕ್ಕೆ ಆಗಮಿಸಲಿದ್ದಾರೆ.
ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕಟ್ಟಡ ಹಾಗೂ ಕೇಂದ್ರ ಗ್ರಂಥಾಲಯದ ನೂತನ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ತೊರೆದ ನಾಗವಳ್ಳಿ ಗ್ರಾಮದ ಮುಖಂಡ ನಂಜುಂಡಸ್ವಾಮಿ, ಗ್ರಾಪಂ ಸದಸ್ಯ ನಾಗರಾಜು, ಎನ್. ಶೆಟ್ಟಣ್ಣ, ನಾಗಮಲ್ಲೇಶ್, ಜಯಶೇಖರ್, ಪುಟ್ಟಯ್ಯ, ಬಸವಣ್ಣ ಮಹದೇವಯ್ಯ ಕೆಜೆಪಿ ಮುಖಂಡ ಅಬ್ದುಲ್ಜಬೀರ್, ಅಪ್ಸರ್, ಸಯದ್ ಜಹೀರ್, ಜುಬೇರ್ ಷರೀಫ್, ಉಬೇರ್, ಅಕ್ರಂ ಪಾಷಾ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾದರು.
ಶಾಸಕ ಎಸ್. ಜಯಣ್ಣ, ನಗರಸಭಾ ಅಧ್ಯಕ್ಷ ನಂಜುಂಡಸ್ವಾಮಿ, ತಾಪಂ ಪ್ರಭಾರ ಅಧ್ಯಕ್ಷೆ ಪಾರ್ವತಮ್ಮ, ಜಿಲ್ಲಾ ಕಾಂಗೆಸ್ ಅಧ್ಯಕ್ಷೆ ರತ್ನಮ್ಮ, ಬ್ಲಾಕ್ ಅಧ್ಯಕ್ಷರಾದ ಸೈಯದ್ರಫಿ, ರಾಜಶೇಖರ್, ತೋಟೇಶ್, ಕೆಂಪಯ್ಯ, ಆಲ್ದೂರು ರಾಜಶೇಖರ್, ಜಿಲ್ಲಾ ಉಪಾಧ್ಯಕ್ಷ ಸದಾಶಿವಮೂರ್ತಿ, ಜಿ.ಪಂ. ಸದಸ್ಯರಾದ ಕೇತಮ್ಮ, ಸಿದ್ದರಾಜು, ಮಾಜಿ ಸದಸ್ಯ ಪಿ. ಮರಿಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಪಾಪಣ್ಣ ಇದ್ದರು.