ಟ್ರ್ಯಾಕ್ಟರ್- ಬೈಕ್ ಡಿಕ್ಕಿ: ಇಬ್ಬರಿಗೆ ಗಾಯ
ಯಳಂದೂರು: ಪಟ್ಟಣದ ಎಸ್‌ಎಸ್ ಕಾನ್ವೆಂಟ್ ಬಳಿ ಟ್ರ್ಯಾಕ್ಟರ್ ಬಾಗೂ ಬಜಾಜ್ ಬೈಕ್ ಡಿಕ್ಕಿ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಬೈಕ್ ಸವಾರ ರಾಜಶೇಖರ ಮತ್ತು ಯೋಗೇಶ್ ಬೈಕ್‌ಗೆ ಪೆಟ್ರೋಲ್ ಹಾಕಿಸಲು ಕೊಳ್ಳೇಗಾಲ ಮಾರ್ಗವಾಗಿ ಹೋಗುತ್ತಿದ್ದ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿದ ಪರಸ್ಪರ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಸವಾರರಿಬ್ಬರಿಗೂ ಗಂಭೀರ ಸ್ವರೂಪದ ಗಾಯವಾಗಿದ್ದು, ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಸಂಬಂಧ ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ಪತ್ತೆಗಾಗಿ ಎಸ್‌ಐ ಚಿಕ್ಕರಾಚಶೆಟ್ಟಿ ಶೋಧನೆ ಕೈಗೊಂಡಿದ್ದಾರೆ.