'ಕಾಂಗ್ರೆಸ್ ಮುಖಂಡರು ಕ್ಷಮೆ ಕೇಳಲಿ'
ಕ.ಪ್ರ.ವಾರ್ತೆ, ತರೀಕೆರೆ.ಜ.6 ಸುಳ್ಳು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದ ಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ, ಆಸ್ಕರ್ ಫರ್ನಾಂಡೀಸ್ ಅವರು ಭಾರತದ ಜನತೆಗೆ ಕ್ಷಮೆ ಕೇಳಬೇಕು ಎಂದು ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ, ಬೆಟ್ಟದಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಕೆ. ಯೋಗೀಶ್, ರೈತ ಮುಖಂಡ ಎಸ್. ಮಲ್ಲೇಶ್ ಹೇಳಿಕೆ ನೀಡಿದ್ದಾರೆ.
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದ್ದು ಸತ್ಯ ಎಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಇಂದಿರಾ ಜಯಸಿಂಗ್ ಸ್ಪಷ್ಟಪಡಿಸಿದ್ದಾರೆ, ಅಡಕೆ ಹಾನಿಕರ ಎಂದು ಸ್ಪಷ್ಟಪಡಿಸಿರುವುದರಿಂದ ಸಂಪೂರ್ಣ ಜನರಿಗೆ ವಂಚನೆ ಮೋಸ, ಸುಳ್ಳು ಹೇಳಿಕೆ ಕೊಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿರುವ ಕಾಂಗ್ರೆಸ್ ಮುಖಂಡರು ಕಾನೂನು ವಿರುದ್ಧ ಹೇಳಿಕೆ ಕೊಟ್ಟಿರುವುದು ದುರದೃಷ್ಟ ಎಂದರು. ಈ ನಿಟ್ಟಿನಲ್ಲಿ ಅವರು ತಕ್ಷಣ ಜನತೆಯ ಕ್ಷಮೆ ಕೇಳಬೇಕು ಮತ್ತು ರಾಜೀನಾಮೆ ನೀಡಲೇಬೇಕು ಎಂದು ತಿಳಿಸಿದ್ದಾರೆ.