ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

Lingaraj Badiger
Updated On : 10 Jan 2014, 12:21 pm

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿ ಜ. 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿ ನಡೆಸಿದಂತೆ ಈ ಬಾರಿಯೂ ಸಹ ಮಹಿಳಾ ಹಾಗೂ ಪುರುಷರ ಜಿಲ್ಲಾ ಮಟ್ಟದ ಬೈಸಿಕಲ್ ಸ್ಪರ್ಧೆಯನ್ನು ನಡೆಸಲಾಗುವುದೆಂದರು.
ಕಂದಾಯ, ಪೊಲೀಸ್, ಪತ್ರಕರ್ತರ ಸಂಘ, ವಕೀಲರ ಸಂಘ ಹಾಗೂ ಅರಣ್ಯ ಸಿಬ್ಬಂದಿಗಳಿಗೆ ಕ್ರಿಕೆಟ್ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಸಮಾರಂಭದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ಸಹ ಸಭೆಯಲ್ಲಿ ರಚಿಸಲಾಗಿದ್ದು, ಎಲ್ಲಾ ಉಪ ಸಮಿತಿಗಳು ಈಗಿನಿಂದಲೇ ಸಭೆ ನಡೆಸಿ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಸಮಾರಂಭದ ಸಂಪೂರ್ಣ ಯಶಸ್ವಿಗೆ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸುವಂತೆಯೂ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರನ್, ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ, ಉಪ ವಿಭಾಗಾಧಿಕಾರಿ ಕೆ. ಚನ್ನಬಸಪ್ಪ, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement