ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಅರ್ಹ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ. 18 ಕೊನೆಯದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು, ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಗ್ಯ ಮಾಹಿತಿ: ಸಾರ್ವಜನಿಕರು ರಾಜ್ಯದ ಯಾವುದೇ ಭಾಗದಿಂದ ಯಾವುದೇ ಶುಲ್ಕವಿಲ್ಲದೆ ತಮ್ಮ ದೂರವಾಣಿಯಿಂದ 104ಕ್ಕೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಯಾವುದೇ ಆರೋಗ್ಯ ಮಾಹಿತಿಗೆ 104ಕ್ಕೆ ಸಂಪರ್ಕಿಸಿ ಆರೋಗ್ಯ ಸಲಹೆ, ಆಪ್ತ ಸಲಹೆ, ಕಾರ್ಯಕ್ರಮಗಳ ಮಾಹಿತಿ, ಸೇವಾ ಸೌಲಭ್ಯಗಳ ಮಾಹಿತಿ, ಸಾಂಕ್ರಾಮಿಕ ರೋಗಗಳ ಕುರಿತಾಗಿ ತ್ವರಿತ ಮಾಹಿತಿ ಹಾಗೂ ಸೇವಾ ಶುಲ್ಕಗಳ ವಿವರಗಳನ್ನು ಜರೂರಾಗಿ ವ್ಯವಸ್ಥೆಯ ಗಮನಕ್ಕೆ ತರಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.