ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ
ನರಸಿಂಹರಾಜಪುರ: ಸ್ವಾಮಿ ವಿವೇನಾದಂರ ಆದರ್ಶಗಳು ಪಾಲಿಸಿದರೆ ಅವಿವೇಕಿಗಳು ಸಹ ವಿವೇಕಿಗಳಾಗುತ್ತಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ನಿಜಾಮುದ್ದೀನ್ ಹೇಳಿದರು. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ 2013-14 ನೇ ಸಾಲಿನ ಸಾಂಸ್ಕೃತಿಕ ಮತ್ತು ರಾಷ್ಚೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭ, ಸ್ವಾಮಿ ವಿವೇಕಾನಂದರ 151ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ತಾಪಂ ಅಧ್ಯಕ್ಷ ಜೆ.ಜಿ.ನಾಗರಾಜ್, ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಹೊರ ಹಾಕಲು ಇಂತಹ ವೇದಿಕೆಗಳು ಉತ್ತಮ ಅವಕಾಶವಾಗಿದೆ. ಸಾಂಸ್ಕೃತಿಕ, ಕ್ರೀಡೆಗಳಲ್ಲಿ ಭಾಗವಹಿಸಿದರೆ ವಿದ್ಯಾರ್ಥಿಗಳ ಪ್ರತಿಭೆಗಳು ಮತ್ತಷ್ಚು ಬೆಳವಣಿಗೆ ಹೊಂದುತ್ತದೆ ಎಂದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸರ್ವಮಂಗಳಮ್ಮ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿ.ಯು.ಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಜಯ್, ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಮೇಘಶ್ರೀ, ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಪಿ.ಜೆ.ಪೆನ್ನಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.