ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಂಗಮೇಶ್ವರಪೇಟೆ ಕ್ಲಸ್ಟರ್ ಮಟ್ಟದ ಕಲಿಕೋತ್ಸವ

Lingaraj Badiger
Updated On : 13 Jan 2014, 10:48 am

ಚಿಕ್ಕಮಗಳೂರು: ತಾಲೂಕಿನ ದೇವದಾನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಇತ್ತೀಚೆಗೆ ಸಂಗಮೇಶ್ವರ ಪೇಟೆ ಕ್ಲಸ್ಟರ್ ಮಟ್ಟದ ಕಲಿಕೋತ್ಸವ ನಡೆಯಿತು.
ದೇವದಾನ ಗ್ರಾಪಂ ಅಧ್ಯಕ್ಷೆ ಲಲಿತಮ್ಮ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿರುವ ಸೌಲಭ್ಯ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು, ಶಾಲೆಗೆ ಕೀರ್ತಿ ತರಬೇಕು ಎಂದು ಕರೆ  ನೀಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಲಾರೆನ್ಸ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ಜಯಶೀಲ್, ಸದಸ್ಯರಾದ ಗಣೇಶ್, ಸತೀಶ್, ನಿವೃತ್ತ ಶಿಕ್ಷಕ ಕೃಷ್ಣಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ರಾಜಕುಮಾರ್, ಎಂ.ಡಿ. ಮಂಜುನಾಥ್, ಹೇಮಾವತಿ, ರುಕೀಯಾ ಆಮೀನಾ, ರುದ್ರಪ್ಪಗೌಡ ಹಾಗೂ ಸುರಕ್ಷಾ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ. ಪ್ರಶಾಂತ್ ಭಟ್, ಖಾಂಡ್ಯ ಹೋಬಳಿಯ ಶಿಕ್ಷಣ ಸಂಯೋಜಕರಾದ ಧನಪಾಲ್ ಹಾಗೂ ಸಿಆರ್‌ಪಿಗಳಾದ ಎಂ.ಆರ್. ರಾಜಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement