ಇಂದು ಕಡೂರಿಗೆ ಮುಖ್ಯಮಂತ್ರಿ
ಕಡೂರು: ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಆರಂಭವಾಗಿರುವ ಶ್ರೀ ಸಿದ್ದರಾಮೇಶ್ವರರ ಎರಡನೇ ದಿನವಾದ ಬುಧವಾರ ಬೆಳಿಗ್ಗೆ 10.30ಕ್ಕೆ ಸಿದ್ದರಾಮ ಸಾಹಿತ್ಯಗೋಷ್ಟಿ ಆರಂಭವಾಗಲಿದೆ. ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ವಹಿಸಲಿದ್ದಾರೆ.
ಶರಣೆ ಅಕ್ಕನಾಗಮ್ಮ ಕೃತಿಯನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗು ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮರ ಆಯ್ದ ವಚನಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದ ಉಧ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಶಾಸಕ ವೈ.ಎಸ್.ವಿ.ದತ್ತ ಅಧ್ಯಕ್ಷತೆ ವಹಿಸಲಿದ್ದಾರೆ.