ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ತರೀಕೆರೆಗೆ ಸಿಎಂ ಭೇಟಿ

Rashmi Kasaragodu
Updated On : 15 Jan 2014, 12:54 pm

ತರೀಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 15ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಮಾರಂಭ ನಡೆಯುವ ಸ್ಥಳಗಳಿಗೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಮಾತನಾಡಿ, ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಸರ್ವ ಸಿದ್ಧತೆ ಮಾಡಲಾಗಿದೆ ಎಂದರು.
ಜ. 15ರ ಬೆಳಗ್ಗೆ 11 ಗಂಟೆಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಶಾಪಿಂಗ್ ಕಾಂಪ್ಲೆಕ್ಸ್ ಉದ್ಘಾಟನೆ, ಬಯಲು ರಂಗಮಂದಿರದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿಸಿದರು.
ನಂತರ ಜಿಲ್ಲಾಧಿಕಾರಿ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಶಾಸಕ ಜಿ.ಎಚ್. ಶ್ರೀನಿವಾಸ್, ಪುರಸಭಾ ಸದಸ್ಯರಾದ ಈರಣ್ಣ, ಟಿ.ಎಸ್. ಧರ್ಮರಾಜ್, ಟಿ.ಎಸ್. ರಮೇಶ್, ಬಿ.ಎಸ್.ಆರ್. ಮಂಜುನಾಥ್, ಅಣ್ಣಯ್ಯ, ಉಪವಿಭಾಗಾಧಿಕಾರಿ ಅನುರಾಧ, ತಹಸೀಲ್ದಾರ್ ಶಿವಕುಮಾರ್, ಎಇಇ ಪ್ರಕಾಶ್, ಆರಕ್ಷಕ ನೀರೀಕ್ಷಕ ಎಚ್.ಎಸ್. ಸುರೇಶ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement