ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿ
ಚಿಕ್ಕಮಗಳೂರು: ಸ್ವಾಮಿ ವಿವೇಕಾನಂದರ 150ನೇ ಜಯಂತ್ಯುತ್ಸವದ ಅಂಗವಾಗಿ ಸ್ವಾಮಿ ವಿವೇಕಾನಂದ ಗ್ರಾಮಾಭಿವೃದ್ಧಿ ಸಮಿತಿ ಫೆ. 8ರಂದು ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಏರ್ಪಡಿಸಿದೆ.
ತಾಲೂಕಿನ ಕೆರೆಮಕ್ಕಿ ಗ್ರಾಮದ ಆಟದ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಪ್ರಥಮ ಬಹುಮಾನವಾಗಿ 25 ಸಾವಿರ ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 15 ಸಾವಿರ ಹಾಗೂ ಟ್ರೋಫಿ ನೀಡಲಾಗುವುದು. ಆಸಕ್ತ ತಂಡಗಳು ಜ. 30ರೊಳಗೆ ಪ್ರವೇಶ ಶುಲ್ಕ 2500 ಸಂದಾಯ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9449316481, 7899698989 ಸಂಪರ್ಕಿಸಬಹುದು ಎಂದು ಕೆರೆಮಕ್ಕಿ ಮಹೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.