'ಬಂಡೆ ಸಾವಿಗೆ ರಾಜ್ಯ ಸರ್ಕಾರವೇ ಕಾರಣ'
ಮೂಡಿಗೆರೆ: ಗುಂಡಿನ ಚಕಮಕಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ದಕ್ಷ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯನ್ನು ಹೊರಬೇಕಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಿ, ಬಂಡೆ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಎಬಿವಿಪಿ ಜಿಲ್ಲಾ ಪ್ರಮುಖ್ ದಾನಿಕ್ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿವೆ ಹೊರತು ಜನ ಸಾಮಾನ್ಯರನ್ನು ಮರೆತಿದೆ ಎನ್ನುವುದಕ್ಕೆ ನಿಷ್ಠಾವಂತ ದಕ್ಷ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ನಿಧನವೇ ಒಂದು ನಿದರ್ಶನವಾಗಿದೆ. ಅದೇ ಯಾರಾದರು ರಾಜಕಾರಣಿಗಳಾಗಿದ್ದರೆ ಅವರಿಗೆ ಬೇರೆ ರಾಜ್ಯ, ಹೊರದೇಶಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ, ದಕ್ಷ ಅಧಿಕಾರಿಗಳಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗದೇ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನದಲ್ಲಿರುವುದು ಮತ್ತು ಮುಂದಿನ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿರುವುದನ್ನು ಗಮನಿಸಿದರೆ. ಜನ ಸಾಮಾನ್ಯರ ಬಗ್ಗೆ ಯಾವುದೇ ನಿರ್ಲಕ್ಷ್ಯ ಭಾವ ತೋರುತ್ತಿದ್ದಾರೆ ಎಂದರು.
ಜನರ ಪರವಾಗಿ ಇರದೆ, ಕುರ್ಚಿ ಉಳಿಸಿಕೊಳ್ಳಲುಯತ್ನಿ ಸುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕ್ರಮವನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಟೈಲರ್ ರಘು, ತೇಜು ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.