ಪೈಗಂಬರ್ ಬದುಕು ಸರ್ವರಿಗೂ ದಾರಿದೀಪ
ನರಸಿಂಹರಾಜಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಸಂದೇಶಗಳು ಹಾಗೂ ಅವರ ದಾರ್ಶನಿಕ ಬದುಕು ಸರ್ವರಿಗೂ ದಾರಿದೀಪ ಎಂದು ಶೆಟ್ಟಿಕೊಪ್ಪ ಸಮೀಪದ ಭದ್ರಾ ಕಾಲೋನಿಯ ಮೊಹಿದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಹನೀಫ್ ಮದನಿ ತಿಳಿಸಿದರು.
ಶೆಟ್ಟಿಕೊಪ್ಪ ಸಮೀಪದ ಭದ್ರಾ ಕಾಲೋನಿಯ ರಂಗಮಂದಿರದಲ್ಲಿ ನಡೆದ ಮಹಮ್ಮದ್ ಪೈಗಂಬರ್ ಅವರ 1488ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಮಾತನಾಡಿದರು. ಅಧ್ಯಕ್ಷತೆಯನ್ನು ಭದ್ರಾ ಕಾಲೋನಿಯ ಜುಮ್ಮಾ ಮಸೀದಿಯ ಅಧ್ಯಕ್ಷ ಸುಲೈಮಾನ್ ವಹಿಸಿದ್ದರು. ಅತಿಥಿಗಳಾಗಿ ಜಿಪಂ ಮಾಜಿ ಸದಸ್ಯ ಬಿ.ಎಸ್. ಸುಬ್ರಮಣ್ಯ, ಕಡಹಿನಬೈಲು ಗ್ರಾಪಂ ಸದಸ್ಯ ಮಳಲಿ ಶ್ರೀನಿವಾಸ್, ಗ್ರಾಪಂ ಮಾಜಿ ಅಧ್ಯಕ್ಷ ಎ.ಬಿ.ಮಂಜುನಾಥ್, ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಕಾಂತರಾಜ್ ಇತರರು ಇದ್ದರು.