ಪ್ರತಿಭಾ ಕಾರಂಜಿಯಲ್ಲಿ ಸಾಧನೆ
ನರಸಿಂಹರಾಜಪುರ: ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಡಿಸಿಎಂಸಿ ಪ್ರೌಢಶಾಲೆಯ ಪಿ. ವಿಜೇತ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕು. ಆಝೂ ಶೇಕ್ ಹಿಂದಿ ಭಾಷಣ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲೆ ಪದ್ಮ ರಮೇಶ್ ತಿಳಿಸಿದ್ದಾರೆ. 4ನೇ ತರಗತಿಯ ವಿದ್ಯಾರ್ಥಿನಿ ಕು. ಕೆನತ್ ಕಥೆ ಹೇಳುವ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. 10ನೇ ತರಗತಿಯ ಕು. ನೇಸರ ಆಂಗ್ಲ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, 10ನೇ ತರಗತಿಯ ಕು. ಇಂಚರ ಕನ್ನಡ ಭಾಷಣ ಸ್ಫರ್ಧೆಯಲ್ಲಿ ದ್ವಿತೀಯ, 10ನೇ ತರಗತಿಯ ಕು. ಸಿಂಚನಶೆಟ್ಟಿ ತುಳು ಭಾಷಣ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.