ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಮೋ ಕಪ್ ಕ್ರಿಕೆಟ್ ಪಂದ್ಯಾವಳಿ

Rashmi Kasaragodu
Updated On : 18 Jan 2014, 12:36 pm

ಚಿಕ್ಕಮಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ನಮೋ ಕಪ್ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಶುಕ್ರವಾರ ನಡೆಯಿತು.
ನಗರದ ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶೃಂಗೇರಿ, ಕೊಪ್ಪ, ಮೂಡಿಗೆರೆ, ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ 10 ತಂಡಗಳು ಭಾಗವಹಿಸಿದ್ದವು.
ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ನಿರಂಜನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿವೇಕಾನಂದರ 150ನೇ ವರ್ಷಾಚರಣೆ ಅಂಗವಾಗಿ 'ಖೇಲೇಗಾ ಯುವ ಜೀತೇಗಾ ಭಾರತ್‌' ಎಂಬ ಘೋಷಣೆಯೊಂದಿಗೆ ದೇಶದಲ್ಲಿರುವ ಎಲ್ಲಾ ಕ್ರಿಕೆಟ್ ಕ್ರೀಡಾಸಕ್ತರಿಗೆ ಪ್ರೋತ್ಸಾಹಿಸಿ ಕ್ರಿಕೆಟ್ ಪ್ರತಿಭೆಯನ್ನು ಗುರುತಿಸುವ ಉದ್ದೇಶ ಹೊಂದಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು.
ಕ್ರೀಡಾಪಟುಗಳು ತಮ್ಮೊಳಗಿರುವ ಪ್ರತಿಭೆಯನ್ನು ಹೊರ ಹಾಕುವ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸಿ ಜಿಲ್ಲೆಯ ಹೆಸರನ್ನು ರಾಷ್ಟ್ರದಾದ್ಯಂತ ಬೆಳಗಲು ಈ ಪಂದ್ಯಾವಳಿ ಸಹಕಾರಿಯಾಗಲಿ ಎಂದು ಹಾರೈಸಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಜಯ್ ಕುಮಾರ್ ಗುಣಸಾಗರ್ ಮಾತನಾಡಿ, ಕ್ರೀಡೆಗಳ ಮೂಲಕ ಯುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಬಿಜೆಪಿ ಮಾಡುತ್ತಿದೆ, ಮಂಡಲದ ಕಾರ್ಯಕರ್ತರ ಜೊತೆ ಉತ್ತಮ ಕ್ರಿಕೆಟ್ ಪಟುಗಳು ಭಾಗವಹಿಸಿದ್ದಾರೆ ಎಂದರು.
ನಗರಸಭೆ ಸದಸ್ಯ ಹೆಚ್.ಡಿ. ತಮ್ಮಯ್ಯ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಸಂಘಟನಾ ಕಾರ್ಯದರ್ಶಿ ಸೀತಾರಾಂ ಭರಣ್ಯ, ಸಮೃದ್ ಪೈ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರೇಮೇಶ್, ಪರೀಕ್ಷಿತ್, ದಾಮೋದರ್, ನಗರಸಭಾ ಸದಸ್ಯರಾದ ದೇವರಾಜ್ ಶೆಟ್ಟಿ, ಸುಧೀರ್, ಶ್ರೀನಿವಾಸ್, ಭುಜೇದ್ರ ರಾಜ್ ಅರಸ್ ಮತ್ತು ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಮಹಮದ್ ಅನ್ವರ್,ನಗರಸಭೆ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್, ಮಧುಕುಮಾರ್ ರಾಜ್ ಅರಸ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement