'ವಿದ್ಯಾರ್ಥಿಗೆ ನಿರ್ದಿಷ್ಟ ಗುರಿ ಅವಶ್ಯ'
ಶಿಕಾರಿಪುರ: ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಣವನ್ನು ಅವಲಂಭಿಸಿದ್ದು, ಶೀಘ್ರಗತಿಯ ಬದಲಾವಣೆಯ ಇಂದಿನ ದಿನದಲ್ಲಿ ವಿದ್ಯಾರ್ಥಿಗಳು ಸೂಕ್ತ ಗುರಿಯ ಮೂಲಕ ಸಾಧನೆಯನ್ನು ಕೈಗೊಳ್ಳಬೇಕಾಗಿದೆ ಎಂದು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಪ್ಪ ತಿಳಿಸಿದರು. ಪಟ್ಟಣದ ಪುಷ್ಪಾ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮೌಲ್ಯವಿಲ್ಲದ ಶಿಕ್ಷಣ ಶೂನ್ಯಕ್ಕೆ ಸಮಾನವಾಗಿದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅತ್ಯಂತ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಶಿ ದೇಶದ ಭವಿಷ್ಯ ವಿದ್ಯಾರ್ಥಿಗಳನ್ನು ಅವಲಂಭಿಸಿದ್ದು, ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆ ಸಲ್ಲಿಸಲು ಶಿಕ್ಷಣ ಅನಿವಾರ್ಯವಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಮುದಾಯ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದೆ ಎಂದರು. ಮುಖ್ಯ ಅತಿಥಿ ಫಾದರ್ ಜೇಸುರಕ್ಷಕನಾಥನ್ ಮುಖ್ಯೋಪಾಧ್ಯಾಯ ಫಾದರ್ ಕೆ.ಎ. ಜಾರ್ಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪುರಸಭಾ ಸದಸ್ಯ ಪಾಲಾಕ್ಷಪ್ಪ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಗೀನ್ಸಾಲ್ವಿಸ್, ಹನುಮಂತಪ್ಪ, ಪ್ರಸನ್ನ, ಶಾಲಾ ಶಿಕ್ಷಕ ಶಿಕ್ಷಕಿಯರು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.