ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತಾಪಂ ನೂತನ ಅಧ್ಯಕ್ಷರಿಗೆ ಅಭಿನಂದನೆ

Mainashree
Updated On : 20 Jan 2014, 11:12 am

ಕಡೂರು: ಬಿಜೆಪಿ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಮಾತು ಕೊಟ್ಟಂತೆ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ದುಡಿಯುವ ಮೂಲಕ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದು ಮಾಜಿ ಶಾಸಕ ಡಾ. ವೈ.ಸಿ. ವಿಶ್ವನಾಥ್ ಹೇಳಿದರು.
ತಾಪಂ ಸಭಾಂಗಣದಲ್ಲಿ ನಿಕಟಪೂರ್ವ ಅಧ್ಯಕ್ಷ ಕೆ. ಓಂಕಾರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ಆಯ್ಕೆಯಾದ ಕುಂಕಾನಾಡು ಬಸವರಾಜು ಅವರನ್ನು ಅಭಿನಂದಿಸಿ ಮಾತನಾಡಿದರು.
ಚುನಾವಣೆಯ ಕಡೆ ಗಳಿಗೆವರೆಗೂ ಎಲ್ಲ ಪಕ್ಷಗಳ ಅಭ್ಯರ್ಥಿಗಳಲ್ಲಿ ಆತಂಕ, ಗೊಂದಲ ಸಹಜ. ಆದರೆ, ಅಧಿಕಾರದ ಹಸ್ತಾಂತರದಲ್ಲಿ ಬಿಜೆಪಿ ಇಂತಹ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಕಡೂರು ತಾಲೂಕು ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕುಂಕಾನಾಡು ಕ್ಷೇತ್ರದ ಬಿಜೆಪಿ ಸದಸ್ಯ ಕೆ.ಎಂ. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಿ ಅಧಿಕಾರ ನೀಡಲಾಗಿದೆ ಎಂದರು.
ಜಿಪಂ ಸದಸ್ಯ ಎಚ್.ಸಿ. ಕಲ್ಮರುಡಪ್ಪ ಮಾತನಾಡಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಚ್.ಶಂಕರ್, ತಾಪಂ ಉಪಾಧ್ಯಕ್ಷೆ ಶೋಭಾ, ಮಾಜಿ ಅಧ್ಯಕ್ಷ ಓಂಕಾರಪ್ಪ, ಎ.ಇ. ರತ್ನ, ಸದಸ್ಯರಾದ ಆರ್.ಶಿವಕುಮಾರ್, ಪ್ರಭುಕುಮಾರ್, ಬಿಜೆಪಿ ಮುಖಂಡರಾದ ಶಿವಶಂಕರ್, ಮಂಜುನಾಥ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement