ಪೋಲಿಯೋ ಲಸಿಕೆಗೆ ಚಾಲನೆ...
ಚಿಕ್ಕಮಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಹೆರಿಗೆ ವಿಭಾಗದ ಆವರಣದಲ್ಲಿ ಭಾನುವಾರ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೊದಲನೇ ಸುತ್ತಿನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ್ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಐದು ವರ್ಷದೊಳಗಿನ 1,03,748 ಮಕ್ಕಳನ್ನು ಗುರುತಿಸಲಾಗಿದ್ದು, ಜ. 20 ಹಾಗೂ 21 ರಂದು ಎರಡು ದಿನಗಳು ಹಳ್ಳಿಗಳಲ್ಲಿನ ಬೂತ್ಗಳಲ್ಲಿ ಬಿಟ್ಟು ಹೋದ ಮಕ್ಕಳಿಗೆ ಹಾಗೂ ಜ. 21ರಿಂದ 22ರವರೆಗೆ ಮೂರು ದಿನಗಳು ನಗರ ಪ್ರದೇಶಗಳಲ್ಲಿನ ಬೂತುಗಳಲ್ಲಿ ಬಿಟ್ಟು ಹೋದ ಮಕ್ಕಳಿಗೆ ಮನೆ ಮನೆಗೆ ಭೇಟಿ ನೀಡಿ ಪೋಲಿಯೊ ಹನಿ ಹಾಕಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ನಗರಸಭಾ ಆಯುಕ್ತರು ಹಾಗೂ ರೋಟರಿ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿ, ಸದಸ್ಯರು ಇನ್ನರ್ವ್ಹೀಲ್ ಅಧ್ಯಕ್ಷರು, ಸದಸ್ಯರು, ರಾಜ್ಯ ಮಟ್ಟದಿಂದ ಆಗಮಿಸಿದ ನೋಡಲ್ ಅಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ಜನ್, ಜಿಲ್ಲಾ ಆರ್ಸಿಎಚ್ ಅಧಿಕಾರಿಗಳು ಹಾಗೂ ಇತರೆ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.