ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

Mainashree
Updated On : 20 Jan 2014, 11:12 am

ತರೀಕೆರೆ: ಸರ್ಕಾರ ನೀಡುವ ಸವಲತ್ತಿನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಪಟ್ಟಣದ ಎಸ್‌ಜೆಎಂ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಪ್ರೊ. ಸಜ್ಜನ ಶೆಟ್ಟರ್ ತಿಳಿಸಿದ್ದಾರೆ.
ಪಟ್ಟಣದ ಯಶೋದಮ್ಮ ನಾಗತಿ ಪ್ರೌಢಶಾಲೆ ವತಿಯಿಂದ ಶಾಲೆ ಆವರಣದಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಗುಣಮಟ್ಟದ ಶಿಕ್ಷಣ: ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ಶಾಲೆಗೆ ನಡೆದುಕೊಂಡು ಬರುವುದನ್ನು ತಪ್ಪಿಸಲು, ಶಾಲೆಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂಬ ಉದ್ದೇಶವನ್ನು ಹೊಂದಿ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ವಿತರಣೆ ಮಾಡುತ್ತಿದೆ. ಸೈಕಲ್‌ಅನ್ನು ಉತ್ತಮ ಸ್ಥಿತಿಯಲ್ಲಿಟ್ಟುಕೊಂಡು ಸವಲತ್ತಿನ ಸದುಪಯೋಗಪಡಿಸಿಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದು ತಿಳಿಸಿದರು. ಪುರಸಭೆ ಸದಸ್ಯ ಅಶೋಕ್‌ಕುಮಾರ್ ಮಾತನಾಡಿ, ಶಾಲೆಗೆ ಪುರಸಭೆಯಿಂದ ಮೂಲ ಸೌಲಭ್ಯ, ಎಸ್ಸಿ, ಎಸ್ಟಿ ವಿದ್ಯಾರ್ಥಿ ವೇತನ ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಪ್ರಾಧ್ಯಾಪಕ ಬಿ.ಟಿ. ಶ್ರೀಶೈಲ ಮಾತನಾಡಿ, ಪುರಸಭೆ ವತಿಯಿಂದ ನೈರ್ಮಲ್ಯ ಮತ್ತು ಉತ್ತಮ ಪರಿಸರ ಕಲ್ಪಿಸಿಕೊಡಬೇಕೆಂದು ಕೋರಿದರು. ಶಾಲೆ ಮುಖ್ಯೋಪಾಧ್ಯಾಯ ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಫಿ ಬೆಳೆಗಾರರಾದ ಬಿ.ವಿ. ಯೋಗೀಶ್, ಪುರಸಭೆ ಸದಸ್ಯೆ ಟಿ.ಎಲ್. ಮಾಲ, ಬಿ.ಜಿ. ಹಿರೇಮಠ್, ಬಿ.ಟಿ. ಶ್ರೀಶೈಲ, ಎಚ್.ಸಿ. ಶಿವಕುಮಾರ್, ಟಿ.ಎಸ್. ಪೃಥ್ವಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement