ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಂಘಟನೆಯಿಂದ ಸಮುದಾಯ ಅಭಿವೃದ್ಧಿ

Mainashree
Updated On : 23 Jan 2014, 12:27 pm

ಕ.ಪ್ರ.ವಾರ್ತೆ  ಚಿಕ್ಕಮಗಳೂರು  ಜ.22
ಅಲ್ಪಸಂಖ್ಯಾತರು ಮತ್ತು ದಲಿತರು ತಮ್ಮಲಿರುವ ಆಂತರಿಕ ಭಿನ್ನಾಭಿಪ್ರಾಯ ಬದಿಗೊತ್ತಿ ಒಂದಾದಾಗ ಮಾತ್ರ ಆ ಸಮುದಾಯಗಳ ಅಭಿವೃಧ್ದಿ ಸಾಧ್ಯ ಎಂದು ಚಿಕ್ಕಮಗಳೂರು ಕ್ಯಾಥೋಲಿಕ್ ಧರ್ಮ ಕ್ಷೇತ್ರದ ಫಾದರ್ ಪ್ಯಾಟ್ರಿಕ್ ಹೇಳಿದ್ದಾರೆ.
ದಲಿತ ಸಂಘರ್ಷ ಸಮಿತಿ ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ದಲಿತರ ಸಮಾನತೆಯ ಸಮಾವೇಶ ಉದ್ಟಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರು ಮತ್ತು ದಲಿತರಲ್ಲಿ ಒಗ್ಗಟ್ಟಿಲ್ಲದಿರುವುದರ ಲಾಭವನ್ನು ಮೇಲ್ವರ್ಗದ ಜನ ಪಡೆದು ಆ ಸಮುದಾಯದವರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದರು.
ಭಿನ್ನಾಭಿಪ್ರಾಯ ಬದಿಗೊತ್ತಿ: ಅಲ್ಪಸಂಖ್ಯಾತರು ಮತ್ತು ದಲಿತರು ದೌರ್ಜನ್ಯ ಮತ್ತು ಶೋಷಣೆಯಿಂದ ಹೊರಬಂದು ತಮ್ಮ ಹಕ್ಕು ಮತ್ತು ಸರ್ಕಾರದ ಸವಲತ್ತು ಪಡೆದುಕೊಳ್ಳಬೇಕಾದರೆ ತಮ್ಮ ನಡುವಿನ ಭಿನ್ನಾಭಿಪ್ರಾಯ ಬಿಟ್ಟು ಸಂಘಟಿತರಾಗಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ. ಕುಮಾರ್, ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ದಲಿತರು ಮತ್ತು ಅಲ್ಪಸಂಖ್ಯಾತರನ್ನು ಒಡೆದು ಆಳುತ್ತಿದ್ದಾರೆ ಎಂದು ಆರೋಪಿಸಿದರು.
ರಾಜಕಾರಣಿಗಳ ಒಡೆದಾಳುವ ನೀತಿಯ ವಿರುದ್ಧ ದಲಿತರು ಮತ್ತು ಅಲ್ಪಸಂಖ್ಯಾತರು ಸಂಘಟಿತರಾಗಿ ಹೋರಾಟ ನಡೆಸುವ ಅಗತ್ಯವಿದ್ದು, ಆ ಹಿನ್ನೆಲೆಯಲ್ಲಿ ದಲಿತ ಸಂಘರ್ಘ ಸಮಿತಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ವಾಸು, ಮೋಹನ್ ಕುಮಾರ್, ಬಸವರಾಜ್, ಮೋನಪ್ಪ, ತಿಪ್ಪೇಶ್ ಮೂರ್ತಿ, ಹೋಬಳಿ ಸಂಚಾಲಕ ಬಸವರಾಜ್, ಐ.ಎನ್.ಟಿ.ಯು.ಸಿ. ಜಿಲ್ಲಾಧ್ಯಕ್ಷ ಪುಷ್ಪರಾಜ್, ನಗರ ಸಂಚಾಲಕ ಪ್ರವೀಣ್ಕುಮಾರ್, ತಾಲೂಕು ಸಂಘಟನಾ ಸಂಚಾಲಕ ವಿ. ಲಕ್ಷ್ಮಣ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement