ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Mainashree
Updated On : 30 Jan 2014, 11:53 am

ಪೂರ್ವಭಾವಿ ಸಭೆ  ನಾಳೆ
ಕೊಪ್ಪ: ತಾಲೂಕಿನ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆಯನ್ನು ಫೆ.1 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಪುರಭವನದಲ್ಲಿ ಕರೆಯಲಾಗಿದೆ ಎಂದು ಕಸಾಪದ ತಾಲೂಕು  ಅಧ್ಯಕ್ಷ ಗುಡ್ಡೇತೋಟ ನಟರಾಜ್ ತಿಳಿಸಿದ್ದಾರೆ. ಈ ಸಭೆಗೆ ಸಾಹಿತ್ಯ ಪರಿಷತ್ತಿನ ಎಲ್ಲಾ ಅಜೀವ ಸದಸ್ಯರು, ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು, ಸಂಘ- ಸಂಸ್ಥೆಗಳ ಮುಖಂಡರು ಹಾಗೂ ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಿದ್ದಾರೆ. 7 ನೇ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ನಡೆಸಲು ಉದ್ದೇಶಿಸಲಾಗಿದೆ. ತಾಲೂಕಿನ ಎಲ್ಲಾ ಕವಿಗಳು ಅವರ ಒಂದು ಉತ್ತಮ ಕವನವನ್ನು ಫೆ.10 ರ ಒಳಗೆ. ಹೆಚ್.ಎಸ್.ಇನೇಶ್,ಪ್ರಧಾನ ಸಂಚಾಲಕರು ಕಸಾಪ ಮಾತೃಶ್ರೀ ಎಲೆಕ್ಟ್ರೀಕಲ್ಸ್ ಸೀತೂರು ಕಾಂಪ್ಲೆಕ್ಸ್ ಮುಖ್ಯರಸ್ತೆ ಕೊಪ್ಪ ಇವರಿಗೆ ಕಳುಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳ 2ನೇ ಆಯ್ಕೆ ಪಟ್ಟಿ ಬಿಡುಗಡೆ
ಚಿಕ್ಕಮಗಳೂರು: ಪ್ರಸಕ್ತ ಸಾಲಿನ ಬಿಇಡಿ ಕೋರ್ಸ್‌ಗೆ ಪ್ರಥಮ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿ ದಾಖಲಾಗದೇ ಇರುವ ಅಭ್ಯರ್ಥಿಗಳ ಎರಡನೇ ಆಯ್ಕೆ ಪಟ್ಟಿಯನ್ನು ಜ.29 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಹಾಗೂ ಡಯಟ್ ಹಾಗೂ ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು ಇಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಒಳಪಟ್ಟು ನಿಗಧಿತ ಶುಲ್ಕವನ್ನು ಫೆಬ್ರವರಿ 1 ರೊಳಗೆ ಪಾವತಿಸಿ ಹಂಚಿಕೆ ಮಾಡಲಾಗಿರುವ ಸಂಸ್ಥೆಗಳಿಗೆ ದಾಖಲಾಗಲು ಸೂಚಿಸಿದೆ. ಈ ಸಂಸ್ಥೆಯಲ್ಲಿ ದಾಖಲಾತಿ ಪ್ರಕ್ರಿಯೆ ಮುಗಿದ ನಂತರ ಅವಶ್ಯಕತೆ ಬಿದ್ದಲ್ಲಿ ಹಾಗೂ ಖಾಲಿ ಸೀಟುಗಳು ಉಳಿದಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ರ್ಯಾಂಕ್ ಆಧಾರದ ಮೇಲೆ ಕೇಂದ್ರೀಕೃತ ದಾಖಲಾತಿ ಘಟಕ (ಸಿಎಸಿ.) ಬೆಂಗಳೂರು ಇಲ್ಲಿ ಕೌನ್ಸಿಲಿಂಗ್ ನಡೆಸಲಾಗುವುದು, ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದೆಂದು ಪ್ರಾಂಶುಪಾಲರು, ಡಯಟ್, ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement