'ಎಲ್ಲರಂತೆ ಬದುಕುವ ಹಕ್ಕು ಲಿಂಗತ್ವ ಅಲ್ಪಸಂಖ್ಯಾತರಿಗೂ ಉಂಟು'
ಚಿಕ್ಕಮಗಳೂರು: ಸಮಾಜದಲ್ಲಿ ಎಲ್ಲರಂತೆ ಬದುಕುವ ಹಕ್ಕು ಲಿಂಗತ್ವ ಅಲ್ಪಸಂಖ್ಯಾತರಿಗೂ ಇದೆ. ಇವರ ಬಗ್ಗೆ ಕೀಳರಿಮೆ ಬೇಡ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್. ಮಹೇಶ್ವರಪ್ಪ ಹೇಳಿದರು. ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ತರಬೇತಿ ಸದುಪಯೋಗ ಪಡೆದುಸ್ವಂತ ಉದ್ಯೋಗ ಮಾಡಿಕೊಂಡು ಹೋದಾಗ ಮಾತ್ರ ಕಾಬ್ಸೈಟ್ ಸಂಸ್ಥೆಗೆ ಹೆಸರು ಬರಲು ಸಾಧ್ಯ ಎಂದರು. ಸಂಸ್ಥೆಯ ನಿರ್ದೇಶಕ ಆರ್.ಕೆ. ಬಾಲಚಂದ್ರ, ಮುಖ್ಯ ಅತಿಥಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಭಿವೃದ್ಧಿ ನಿರೀಕ್ಷಕರಾದ ಬಿ.ಕೆ. ಪವಿತ್ರ, ಸಂಸ್ಥೆಯ ಉಪನ್ಯಾಸಕ ಕೆ. ಪ್ರಭಾಕರ್ ಮಾತನಾಡಿದರು.