ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಹೈನುಗಾರಿಕೆಯಿಂದ ಸ್ವಾವಲಂಬಿ ಜೀವನ'

Mainashree
Updated On : 13 Jul 2014, 11:06 am

ಬೀರೂರು: ವಲಯದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಆಶ್ರಯದಲ್ಲಿ ಇಲ್ಲಿನ ಶ್ರೀವಾಸವಿ ಕಲ್ಯಾಣ ಮಂಟಪದಲ್ಲಿ ಹೈನುಗಾರಿಕೆ ಹಾಗೂ ಕೃಷಿ ಪ್ರಗತಿ ಕುರಿತ ವಿಚಾರ ಸಂಕಿರಣ ನಡೆಯಿತು. ಪುರಸಭಾಧ್ಯಕ್ಷೆ ಗೀತಾ ಹೇಮಂತ್ ಕಾರ್ಯಕ್ರಮ ಉದ್ಘಾಟಿಸಿ, ಬೀರೂರು ಹೋಬಳಿಯಲ್ಲಿ ಹೈನುಗಾರಿಕೆ ಹಾಗೂ ಲಾಭದಾಯಕ ಕೃಷಿಗೆ ಸಾಕಷ್ಟು ಅವಕಾಶಗಳಿದ್ದು ಸಮಗ್ರ ಮಾಹಿತಿಯನ್ನು ಕೃಷಿ ತಜ್ಞರಿಂದ ಪಡೆದು ಕೃಷಿ ಚಟುವಟಿಕೆ ಕೈಗೊಂಡಲ್ಲಿ ಸಾಕಷ್ಟು ಲಾಭ ಪಡೆಯಲು ಸಾಧ್ಯ ಎಂದರು. ಡಾ. ಸಿದ್ದೇಶ್, ಸಹಾಯಕ ತೋಟಗಾರಿಕಾ ಅಧಿಕಾರಿ ಶಿವಣ್ಣ, ತೋಟಗಾರಿಕಾ ಬೆಳೆಗಳಲ್ಲಿ ಮಿಶ್ರಬೆಳೆಗಳ ಕುರಿತಂತೆ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಎಚ್.ಕೆ. ಮಂಜುನಾಥ್ ಮಾತನಾಡಿದರು. ಮಹಿಳಾ ಸಂಘಟಕಿ ವಸಂತಮ್ಮ, ಕೃಷಿ ಅಧಿಕಾರಿ ಬಾಬು ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಭಾಗ್ಯ ಅಧ್ಯಕ್ಷತೆ ವಹಿಸಿದ್ದರು. ಧನಪಾಲ್ ಸ್ವಾಗತಿಸಿ, ನಾಗೇಶ್ ನಿರೂಪಿಸಿದರು. ನಾಗರತ್ನ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement