ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹಕ್ಕು, ಕರ್ತವ್ಯಗಳೆರಡನ್ನೂ ಪಾಲಿಸಿ: ನ್ಯಾ. ರಾಜು

Mainashree
Updated On : 15 Jul 2014, 10:30 am

ಶೃಂಗೇರಿ: ಪ್ರತಿಯೊಬ್ಬರು ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಶೃಂಗೇರಿ ಜೆಎಂಎಫ್‌ಸಿ ಹಾಗೂ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಎಂ.ರಾಜು ಹೇಳಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಕಾನೂನು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ವಕೀಲರ ಸಂಘದ ಸಹಯೋಗದೊಂದಿಗೆ ಸಂಚಾರಿ ಕಾನೂನು ಸಾಕ್ಷರತಾ ರಥದ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಕಚೇರಿ ಹಾಗೂ ಇತರ ಕಡೆಗಳಲ್ಲಿ ಹಕ್ಕು ಚಲಾಯಿಸುತ್ತೇವೆ. ಆದರೆ ಕರ್ತವ್ಯ ಪಾಲಿಸಲು ಮರೆಯುತ್ತೇವೆ. ಕರ್ತವ್ಯಗಳನ್ನು ಸರಿಯಾಗಿ ಪಾಲಿಸದಿದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ಧತೆ ಕದಡಿ ಸಮಾಜದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಕರ್ತವ್ಯಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶೃಂಗೇರಿಗೆ ಆಗಮಿಸಿದ ಕಾನೂನು ಸಾಕ್ಷರತಾ ರಥಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಸ್ವಾಗತಿಸಿದರು. ವಕೀಲರ ಸಂಘದ ಅಧ್ಯಕ್ಷ ಉಮೇಶ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ವಕೀಲ ಮಹೇಶ್, ರಾಜೇಶ್ವರಿ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಕೆ.ಜಿ.ಸಿದ್ದಲಿಂಗೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನ ಕುಮಾರ್, ಸರ್ಕಾರಿ ವಕೀಲೆ ವೀಣಾ, ಪುಷ್ಪಲಕ್ಷ್ಮಿನಾರಾಯಣ್,ಪೂರ್ಣಿಮಾ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು. ಶಶಿಭೂಷಣ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement